Heavy Rain: ಕರ್ನಾಟಕದಲ್ಲಿ ಮಾನ್ಸೂನ್ ಮತ್ತೆ ಚುರುಕು... ಈ ಭಾಗಗಳಲ್ಲಿ ಧಾರಾಕಾರ ಮಳೆ!

Heavy Rain: ಮುಂಗಾರು ಮಾರುತಗಳು ಶ್ರೀಲಂಕಾದ ಕರಾವಳಿ ಮೂಲಕ ಸಾಗಿ ತಮಿಳುನಾಡು ಕರಾವಳಿಗೆ ನುಗ್ಗುತ್ತಿವೆ. ಇದರಿಂದ ತಮಿಳುನಾಡು - ಕೇರಳ ರಾಜ್ಯದಲ್ಲಿ ಮಳೆ ಆಗುತ್ತಿದ್ದು. ತಮಿಳುನಾಡು ಭಾಗದಿಂದ ಬರುತ್ತಿರುವ ಮೋಡಗಳಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗಿ ಪರಿವರ್ತನೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಾಗೂ ಹವಾಮಾನ ಬದಲಾವಣೆಯಿಂದಾಗಿ ಇಂದಿನಿಂದ ಜುಲೈ 13ರಿಂದ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಯಾವೆಲ್ಲಾ ಭಾಗದಲ್ಲಿ ಮಳೆ ಆಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಚಂಡಮಾರುತದ ಪ್ರಭಾವವಾಗಿ ಕರ್ನಾಟಕದ ಹಲವು ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಇನ್ನು ಎರಡು ದಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು. ಜುಲೈ 15ರ ನಂತರ ರಾಜ್ಯದಾದ್ಯಂತ ಮುಂಗಾರು ಚುಕುರು ಪಡೆದುಕೊಳ್ಳಲಿದ್ದು. ವಿವಿಧೆಡೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Heavy Rain Monsoon intensifies again in Karnataka Heavy rain in these parts

ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದೂ ಸಹ ಧಾರಾಕಾರ ಮಳೆ ಮುಂದುವರಿದಿದೆ. ಸಮುದ್ರ ಮಟ್ಟದಲ್ಲಿ ಮಾನ್ಸೂನ್ ಪ್ರಭಾವ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಮಳೆ ಆಗುತ್ತಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ನಾಲ್ಕರಿಂದ ಐದು ದಿನಗಳ ಕಾಲ ಮಳೆ ಅಬ್ಬರ ಇರಲಿದೆ ಎಂದು ಹೇಳಲಾಗಿದೆ.

ಕರಾವಳಿ: ಇನ್ನು ಇಂದು ಹಾಗೂ ಮುಂದಿನ ಮೂರ್ನಾಲ್ಕು ದಿನಗಳ ಅವಧಿಗೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ.

ದಕ್ಷಿಣ ಕರ್ನಾಟಕ: ಇನ್ನು ದಕ್ಷಿಣ ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆ ಇರಲಿದೆ.

ಉತ್ತರ ಕರ್ನಾಟಕದ: ಬೆಳಗಾವಿ, ಗದಗ, ಬಾಗಲಕೋಟೆ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇರಲಿದೆ. ಅಲ್ಲದೇ ಬೀದರ್, ವಿಜಯಪುರ, ಕಲಬುರಗಿ, ರಾಯಚೂರು, ಕೊಪ್ಪಳ್ಳ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಇದರೊಂದಿಗೆ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಹಾಗೂ ವಿಜಯನಗರದಲ್ಲಿ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ: ಬೆಂಗಳೂರಿನಲ್ಲಿ ಭಾನುವಾರ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣ ಇರಲಿದ್ದು. ಸಾಧಾರಣ ಅಥವಾ ಹಗುರದಿಂದ ಕೂಡಿದ ಮಳೆ ಆಗಲಿದೆ. ಗರಿಷ್ಠ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+