ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 48 ಗಂಟೆಗಳ ರೆಡ್ ಅಲರ್ಟ್

ಬೆಂಗಳೂರು, ಜುಲೈ 11; ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಚುರುಕುಗೊಂಡಿದ್ದು, ಜುಲೈ 11 ಮತ್ತು 12ರಂದು ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರ ತನಕ ಮಳೆ ಮುಂದುವರೆಯಲಿದೆ. ಸಮುದ್ರದಲ್ಲಿ 3.3 ಮೀಟರ್ ತನಕ ಅಲೆಗಳು ಏಳುವ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

 Heavy Rain Predicted Red Alert In Many Districts Till July 12

ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಬಂಟ್ವಾಳದಲ್ಲಿ ತಡೆಗೋಡೆ ಉರುಳಿ ಬಿದ್ದು ಮಗು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಜಿಲ್ಲೆಯ ಬಂಟ್ವಾಳ, ಸುಳ್ಯ, ಮಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ, ಕಾಪು ಮತ್ತು ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಶೃಂಗೇರಿ, ಕೊಪ್ಪ ಮತ್ತು ಎನ್‌. ಆರ್. ಪುರದಲ್ಲಿ ಸಾಧಾರಣ ಮಳೆ ಸುರಿದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿಯ ಕೋಣಂದೂರು, ಸೊರಬ, ಶಿಕಾರಿಪುರದಲ್ಲಿ ಸಾಧಾರಣ ಮಳೆಯಾಗಿದ್ದರೆ, ಹೊಸನಗರಲ್ಲಿ ಹೆಚ್ಚಿನ ಮಳೆಯಾಗಿದೆ.

ಬೀದರ್‌ನಲ್ಲಿ ಮಾಂಜ್ರಾ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಸಂತಪುರ-ಠಾಣಾಕುಶನೂರ ನಡುವಿನ ರಸ್ತೆ ಕೊಚ್ಚಿ ಹೋಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ.

ಕಲಬುರಗಿ ಜಿಲ್ಲೆಯ ಸೇಡಂ, ಚಿಂಚೋಳಿ, ಕಮಲಾಪುರ, ಯಡ್ರಾಮಿಯಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನಲ್ಲಿ ಸುರಿದ ಮಳೆಗೆ ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+