ಭಾರಿ ಮಳೆ ಮನ್ಸೂಚನೆ: ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್

Recommended Video

      ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ | ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ | Oneindia Kannada

      ಬೆಂಗಳೂರು, ಜುಲೈ 20: ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

      ಕೇರಳದಲ್ಲಿ ಭರ್ಜರಿ ಮಳೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲೂ ಜುಲೈ 23ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

      ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲೂ 5 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರ ಕೆಲವೆಡೆ ಸ್ವಲ್ಪ ಮಳೆಯಾಗಿದ್ದು ಬಿಟ್ಟರೆ ಮೋಡಕವಿದ ವಾತಾವರಣ ಮುಂದುವರೆದಿದೆ.

      ದಕ್ಷಿಣ ಕನ್ನಡದಲ್ಲೂ ವಿಪರೀತ ಮಳೆ

      ದಕ್ಷಿಣ ಕನ್ನಡದಲ್ಲೂ ವಿಪರೀತ ಮಳೆ

      ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಶನಿವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜುಲೈ 20ರಿಂದ 22ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

      ಪ್ರವಾಹಕ್ಕೆ ತತ್ತರಿಸಿದ ಮೂರು ರಾಜ್ಯಗಳು

      ಪ್ರವಾಹಕ್ಕೆ ತತ್ತರಿಸಿದ ಮೂರು ರಾಜ್ಯಗಳು

      ಬಿಹಾರ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರವಾಹವಾಗಿದೆ. ಒಟ್ಟು 123 ಮಂದಿ ಮೃತಪಟ್ಟಿದ್ದಾರೆ. ಬಿಹಾರದ 12 ಜಿಲ್ಲೆಯ 47 ಲಕ್ಷ ಜನರು ಪ್ರವಾಹಕ್ಕೆ ತುತ್ತಾಗಿದ್ದು, 78 ಜನರು ಮೃತಪಟ್ಟಿದ್ದಾರೆ. ಅಸ್ಸಾಂನ 29 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಈವರೆಗೆ 54 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ, 36 ಮಂದಿ ಮೃತಪಟ್ಟಿದ್ದಾರೆ.

      ಬ್ರಹ್ಮಪುತ್ರ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ

      ಬ್ರಹ್ಮಪುತ್ರ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ

      ಬ್ರಹ್ಮಪುತ್ರ ಹಾಗೂ ರಾಜ್ಯದ ಇತರೆ ನದಿಗಳು ವಾರದಿಂದ ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಸಾವಿರಾರು ಗ್ರಾಮಗಳು ಜಲಾವೃತವಾಗಿದೆ. ಮಾನಸ ಮತ್ತು ಪೊಬಿಟೋರಾ ವನ್ಯಜೀವಿ ಅಭಯಾರಣ್ಯದ ಹೆಚ್ಚಿನ ಭಾಗ ಸಂಪೂರ್ಣ ನೀರಿನಲ್ಲಿ ಮಲಗಿದೆ. ಇದರಿಂದಾಗಿ 25 ಲಕ್ಷ ವಿವಿಧ ವನ್ಯಜೀವಿಗಳು ಸಂಕಷ್ಟಕ್ಕೆ ಸಿಲುಕಿವೆ. ಕಾಜಿರಂಗ ರಾಷ್ಟ್ರೀಯ ಅಭಯಾರಣ್ಯದ ಶೇ. 50ರಷ್ಟು ಪ್ರಾಣಿಗಳು ಮೃತಪಟ್ಟಿವೆ. ಇವುಗಳಲ್ಲಿ ಬಹುತೇಕ ಪ್ರಾಣಿಗಳು ಜೀವ ಉಳಿಸಿಕೊಳ್ಳಲು ಹೊರ ಹೋಗುವಾಗ ವಾಹನಗಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡಿವೆ.

      ಕಬಿನಿ ನೀರು ತಮಿಳುನಾಡಿಗೆ

      ಕಬಿನಿ ನೀರು ತಮಿಳುನಾಡಿಗೆ

      ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿರುವ ಪರಿಸ್ಥಿತಿಯಲ್ಲೇ ಜಲಾಶಯದಿಂದ ತಮಿಳುನಾಡಿಗೆ 2500 ಕ್ಯೂಸೆಕ್ ನೀರು ಹರಿಯಬಿಡಲಾಗಿದೆ. ಜಲಾಶಯ ತುಂಬಲು ಇನ್ನೂ 15 ಅಡಿ ಬಾಕಿ ಇರುವಾಗಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

      ಅಸ್ಸಾಂನಲ್ಲಿ 5.5 ತೀವ್ರತೆಯ ಭೂಕಂಪ

      ಅಸ್ಸಾಂನಲ್ಲಿ 5.5 ತೀವ್ರತೆಯ ಭೂಕಂಪ

      ಕಳೆದ 24 ಗಂಟೆಗಳಲ್ಲಿ ಅರುಣಾಚಲ ಪ್ರದೇಶದಲ್ಲಿ ಎರಡನೇ ಬಾರಿಗೆ ಭೂಮಿ ಕಂಪಿಸಿದೆ. ಭೂಕಂಪ ತೀವ್ರತೆ ರಿಕ್ಟರ್ ಮಾಪನದಲ್ಲಿ 5.5 ತೀವ್ರತೆ ದಾಖಲಾಗಿದೆ. ಈಶಾನ್ಯ ರಾಜ್ಯದ ಅರುಣಾಚಲ ಪ್ರದೇಶದಲ್ಲಿ ಶನಿವಾರ ಬೆಳಗಿನ ಜಾವ 4.24ಕ್ಕೆ 5.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪ್ರಾಥಮಿಕ ವರದಿ ಪ್ರಕಾರ ಯಾವುದೇ ಸಾವು, ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಮೊದಲೇ ಅಸ್ಸಾಂನಲ್ಲಿ ಪ್ರವಾಹವಿದ್ದು ಅಲ್ಲಿನ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

      ಉತ್ತರ ಕನ್ನಡದಲ್ಲೂ ಮಳೆ ಚುರುಕು

      ಉತ್ತರ ಕನ್ನಡದಲ್ಲೂ ಮಳೆ ಚುರುಕು

      ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ನೈಋತ್ಯ ಮುಂಗಾರು ಚುರುಕುಗೊಂಡಿದೆ. ಬೆಳಗಾವಿ, ವಿಜಯಪುರ, ಗದಗ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಜುಲೈ 21ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+