Karnataka Rain: ಹುಬ್ಬಳ್ಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ತಾಪಮಾನ ಹೆಚ್ಚಳದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದ ಉತ್ತರ ಕರ್ನಾಟಕದ ಭಾಗದಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಕಾದಿದ್ದ ಭೂಮಿಯನ್ನು ತಂಪಾಗಿಸಿದೆ. ಹುಬ್ಬಳ್ಳಿ, ಬೆಳಗಾವಿ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.

ಅದರಲ್ಲೂ ಬೆಳಗಾವಿ ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ ಬುಧವಾರ ವ್ಯಾಪಕ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಹಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿದರೆ, ಹುಬ್ಬಳ್ಳಿ ನಗರದಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ.

Heavy Rain Reported At Parts of Hubballi And Many Parts Of North Karnataka

ಹುಬ್ಬಳ್ಳಿ ನಗರದಲ್ಲಿ ಸಂಜೆ ಶುರುವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಜನತೆಗೆ ಮಳೆ ಬಂದಿದ್ದು ಮತ್ತಷ್ಟು ಖುಷಿ ತಂದಿದೆ. ಸಂಜೆ ಶುರುವಾದ ಮಳೆ ರಾತ್ರಿಯವರೆಗೂ ಮುಂದುವರೆದಿದೆ. ಗುಡುಗು, ಮಿಂಚು ಸಹಿತ ಮಳೆಯಾಗಿದ್ದು, ಹಲವು ಮಂದಿ ಎಕ್ಸ್‌ನಲ್ಲಿ ಮಳೆಯ ವಿಡಿಯೋಗಳನ್ನು ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಜಿಲ್ಲೆಗಳಲ್ಲಿ ಉತ್ತಮ ಮಳೆ

ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬಿಜಾಪುರ, ದಾವಣಗೆರೆ, ಹಾವೇರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಸಾಧಾರಣ ಗುಡುಗು ಸಹಿತ ಸುರಿದಿದೆ.

ಬೆಳಗಾವಿಯಲ್ಲಿ ಭರ್ಜರಿ ಮಳೆ

ಬೆಳಗಾವಿಯಲ್ಲಿ ಕೂಡ ಬುಧವಾರ ಸಂಜೆ ವ್ಯಾಪಕ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೆರ್ಲಿ ಪ್ರದೇಶದಲ್ಲಿ 57 ಮಿ.ಮೀ ಮಳೆಯಾಗಿದೆ. ಕಾಕತಿ, ಹೊನಗ, ಕಡೊಲಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ.

ಇನ್ನೂ ಒಂದು ವಾರ ಮಳೆ

ರಾಜ್ಯಾದ್ಯಂತ ಏಪ್ರಿಲ್ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ. ಏಪ್ರಿಲ್ 11 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಶುಕ್ರವಾರ ರಾಜ್ಯದ ಕೊಡಗು, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಶಿವಮೊಗ್ಗ, ದಾವಣಗೆರೆ, ಹಾವೇರಿ, ವಿಜಯನಗರ, ಬಿಜಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+