Heavy Rain: ಮಳೆ.. ಮಳೆ.. ಮಳೆ ಆರ್ಭಟಕ್ಕೆ ಕುಣಿದು ಕುಪ್ಪಳಿಸಿದ ಕನ್ನಡಿಗರು!
ಮಳೆ.. ಮಳೆ.. ಮಳೆ.. ಹೀಗೆ ಮಳೆಗಾಗಿ ಕಾದು ಕುಳಿತಿದ್ದ ಕನ್ನಡಿಗರಿಗೆ ಇದೀಗ ಸಿಹಿಸುದ್ದಿ ಸಿಕ್ಕಿದೆ. ನಿನ್ನೆ ಕೊಡಗು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬಿದ್ದಿದೆ. ಹಾಗೇ ಇದೇ ಸಮಯದಲ್ಲಿ ಮುಂದಿನ ಕೆಲವೇ ದಿನದಲ್ಲಿ ಮಳೆ ವಿಚಾರದಲ್ಲಿ ಭರ್ಜರಿ ಸಿಹಿಸುದ್ದಿ ಸಿಗುವುದು ಪಕ್ಕಾ ಆಗಿದೆ. ಹಾಗಾದ್ರೆ ಏನದು ಸಿಹಿಸುದ್ದಿ..? ಕರ್ನಾಟಕದ ಯಾವ ಯಾವ ಜಿಲ್ಲೆಯಲ್ಲಿ ಭರ್ಜರಿ ಮಳೆ ಬೀಳಲಿದೆ? ಬನ್ನಿ ಪೂರ್ತಿ ಮಾಹಿತಿ ತಿಳಿಯೋಣ.
ಅಂತೂ ಕರ್ನಾಟದಲ್ಲಿ ಮಳೆಯ ಅಬ್ಬರ ಶುರುವಾಗಿದ್ದು, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಈ ಮೂಲಕ ಜನರಿಗೆ ಒಂದಷ್ಟು ನೆಮ್ಮದಿ ಸಿಕ್ಕಿದೆ. ಸುಮಾರು ಒಂದೂವರೆ ತಿಂಗಳಿಂದ ಭಾರಿ ಬಿಸಿಲಿನ ಬೇಗೆಯಲ್ಲಿ ಬೆಂದು ಹೋಗಿರುವ ನಮ್ಮ ಕನ್ನಡ ನಾಡಿಗೆ ಮಳೆ ಒಂದಷ್ಟು ರಿಲೀಫ್ ನೀಡಿದೆ. ಹೀಗಿದ್ದಾಗ ಮತ್ತೊಂದು ಭರ್ಜರಿ ಸುದ್ದಿ ಕೂಡ ಸಿಕ್ಕಿದೆ. ಅದು ಅಂತಿಂತಹ ಸುದ್ದಿ ಅಲ್ಲ, ಇನ್ನೇನು ಇಡೀ ಕರ್ನಾಟಕವೇ ಮಳೆಯ ಖುಷಿಯಲ್ಲಿ ನೆನೆಯುವ ಖುಷಿ ಖುಷಿಯಾದ ಸುದ್ದಿ. ಹಾಗಾದ್ರೆ ಕರ್ನಾಟಕದಲ್ಲಿ ಭಾರಿ ಮಳೆ ಶುರುವಾಗುವುದು ಯಾವಾಗ? ಮುಂದೆ ಓದಿ.

ಬಂತು.. ಬಂತು.. ಮಳೆ ಬಂತು!
ಮಳೆ ಬರದೇ ಇದ್ದರೆ ಏನಾಗುತ್ತೆ? ಅನ್ನೋದನ್ನ ಇಡೀ ಕನ್ನಡ ನಾಡಿನ ಜನತೆ ಈಗ ಪೂರ್ತಿ ಅನುಭವಿಸಿದ್ದಾರೆ. ಯಾಕಂದ್ರೆ ಕಳೆದ ವರ್ಷ ಅಂದ್ರೆ 2023ರಲ್ಲಿ ಕೂಡ ಮಳೆ ಇಲ್ಲದೆ ಜನ ಭಾರಿ ಸಮಸ್ಯೆ ಎದುರಿಸಿದ್ದರು. ಅದೇ ರೀತಿ ಈ ಬಾರಿ ಕೂಡ ಮಳೆ ಕೈಕೊಟ್ಟ ಕಾರಣಕ್ಕೆ, ಕನ್ನಡ ನಾಡು ನರಳಿ ಹೋಗಿದೆ. ಬಿಸಿಲಿನ ಧಗೆ ಹೇಗಿದೆ ಎಂದರೆ, ಮನೆಯ ಮೇಲೆ ಇಟ್ಟಿರುವ ನೀರಿನ ಟ್ಯಾಂಕರ್ ಕೂಡ ಬಿಸಿಯಾಗಿ ನೀರು ಕೊತ ಕೊತ ಕುದಿಯುತ್ತಿದೆ. ನಲ್ಲಿಯಲ್ಲಿ ಸೋಲಾರ್, ಅಥವಾ ಯಾವುದೇ ವ್ಯವಸ್ಥೆ ಇಲ್ಲದೆ ನೇರವಾಗಿ ಸೂರ್ಯನೇ ಬಿಸಿ ನೀರು ಕೊಡುತ್ತಿದ್ದಾನೆ. ಇಂತಹ ಪರಿಸ್ಥಿತಿ ನಿರ್ಮಾಣವಾದ ಸಮಯದಲ್ಲೇ ಭರ್ಜರಿ ಮಳೆ ಕರ್ನಾಟಕ ರಾಜ್ಯದಲ್ಲೀಗ ಶುರುವಾಗಿದೆ!
ಅಷ್ಟಕ್ಕೂ ಹವಾಮಾನ ಇಲಾಖೆ ಅಂದಾಜಿನ ಪ್ರಕಾರ ಕಳೆದ ತಿಂಗಳು, ಅಂದ್ರೆ ಮಾರ್ಚ್‌ನ ಆರಂಭದಲ್ಲೇ ಒಂದಷ್ಟು ಮಳೆ ಬರಬೇಕಿತ್ತು. ಆದರೆ ಹವಾಮಾನ ವೈಪರಿತ್ಯದ ಪರಿಣಾಮ ಕರ್ನಾಟಕಕ್ಕೆ ಬೀಳಬೇಕಿದ್ದ ಮಳೆ ಉತ್ತರ ಭಾರತಕ್ಕೆ ಹೋಗಿತ್ತು. ಇದೀಗ ಏಪ್ರಿಲ್ 12 ರಿಂದ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಮಳೆಯಾಗಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ. ಇದು ಕನ್ನಡಿಗರಿಗೆ ಭರ್ಜರಿ ಸುದ್ದಿ ಕೊಟ್ಟಂತಾಗಿದೆ.
ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ!
ಹವಾಮಾನ ಮುನ್ಸೂಚನೆ ಮಾಹಿತಿ ನೀಡುವಂತೆ ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 2ನೇ ವಾರದಿಂದಲೇ ಮಳೆಯಾಗಲಿದೆ ಅಂತಾ ಹೇಳಲಾಗಿದೆ. ಇದು ಒಂದು ಕಡೆಯಾದರೆ ಈಗಾಗಲೇ, ಕಾವೇರಿ ನದಿ ತವರು ಕೊಡಗು ಸೇರಿದಂತೆ ಚಿಕ್ಕಮಗಳೂರು, ಹುಬ್ಬಳ್ಳಿ & ಧಾರವಾಡ ಸೇರಿ ಗಡಿನಾಡು ಬೆಳಗಾವಿ ಜಿಲ್ಲೆಯಲ್ಲೂ ಮಳೆ ಬಿದ್ದಿದೆ. ನಿನ್ನೆ ಕೂಡ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಮಳೆ ಬಿದ್ದಿದ್ದು ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಒಟ್ನಲ್ಲಿ ಮಳೆ ಬರಬೇಕು ಇಲ್ಲವಾದರೆ ಪರಿಸ್ಥಿತಿ ಕೈಮೀರಿ ಹೋಗುವುದು ಗ್ಯಾರಂಟಿ. ಹೀಗೆ ಮಳೆ ಕೈಕೊಟ್ಟು ಹೋದರೆ ಕನ್ನಡಿಗರು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಇದೆ ಕಾರಣಕ್ಕೆ ಈಗಾಗಲೇ ವಿಶೇಷ ಪೂಜೆ & ಹೋಮ, ಹವನ ಕೂಡ ನಡೆದಿದ್ದವು. ಇದರ ಜತೆ ವರುಣ ದೇವನ ಬಳಿ ಕನ್ನಡಿಗರು ಬೇಡಿಕೆ ಇಟ್ಟಿದ್ದರು. ಅದು ಈಗ ಈಡೇರಿದ್ದು, ಮಳೆಯ ಆರ್ಭಟ ಬಲು ಜೋರಾಗಿದೆ.
ಮಳೆ ಬರುತ್ತಾ? ಮಳೆ ಬರಲ್ವಾ?
ಹೌದು, ಮಳೆ ಬರದೇ ಇದ್ದರೆ ಕನ್ನಡಿಗರ ಪರಿಸ್ಥಿತಿ ವ್ಯತಿರಿಕ್ತ ಆಗಲಿದೆ. ಯಾಕಂದ್ರೆ ಇದೀಗ ಕರ್ನಾಟಕದ ಬಹುತೇಕ ನದಿ & ಕೆರೆ ಸೇರಿದಂತೆ ಜಲ ಮೂಲಗಳು ಬತ್ತಿ ಹೋಗಿವೆ. ಹೀಗಾಗಿ ಮಳೆ ಬರಲೇಬೇಕು ದೇವರೆ ಅಂತಾ ಕಾಯುತ್ತಿದ್ದಾರೆ ಕನ್ನಡಿಗರು. ಹೀಗಿದ್ದಾಗ ಭರ್ಜರಿಯಾದ ಸುದ್ದಿಯನ್ನ ಹವಾಮಾನ ಇಲಾಖೆ ಕೊಟ್ಟಿದೆ. ಈಗಾಗಲೇ ಕೊಡಗು, ಚಿಕ್ಕಮಗಳೂರು ಸೇರಿ ಶಿವಮೊಗ್ಗ, ದಾವಣಗೆರೆ, ಬೆಳಗಾವಿ ಜಿಲ್ಲೆಗಳಲ್ಲಿ ಒಂದೊಂದು ಭಾರಿ ಮಳೆ ಬಿದ್ದಿದೆ. ಈಗ, ಇಡೀ ಕರ್ನಾಟಕದಲ್ಲಿ ಮಳೆ ಅಬ್ಬರಿಸಲಿದೆ ಎನ್ನಲಾಗುತ್ತಿದೆ. ಈ ನಡುವೆ ಕಳೆದ ತಿಂಗಳು ಕೂಡ ಇದೇ ರೀತಿ ಮಳೆ ಬೀಳುವ ಮುನ್ಸುಚನೆ ಹವಾಮಾನ ತಜ್ಞರಿಂದ ಸಿಕ್ಕಿತ್ತು. ಆದರೂ ಮಳೆ ಬೀಳಲೇ ಇಲ್ಲ! ಈ ಬಾರಿ ಕೂಡ ಹಂಗೆ ಆಗುತ್ತಾ? ಕಾದು ನೋಡಬೇಕು.
ಕನ್ನಡಿಗರ ಆಸೆಯನ್ನ ವರುಣ ದೇವ...
ಕರ್ನಾಟಕದಲ್ಲಿ ಮಳೆ ಇಲ್ಲದೆ ಭೀಕರ ಬರಗಾಲ ಎದುರಾದ ಕಾರಣಕ್ಕೆ ರಾಜ್ಯ ಸರ್ಕಾರಕ್ಕೂ ದೊಡ್ಡ ತಲೆನೋವು ಶುರುವಾಗಿದೆ. ಯಾಕಂದ್ರೆ ಪರಿಸ್ಥಿತಿ ಇದೇ ರೀತಿ ಮುಂದುವರಿದು, ಈ ಬರ ಇನ್ನೂ ಹಲವು ತಿಂಗಳು ಮುಂದುವರಿಯುತ್ತೆ ಎಂಬ ಭಯ ಆವರಿಸಿತ್ತು. ಈ ಕಾರಣಕ್ಕೆ ತಕ್ಷಣಕ್ಕೆ ಮಳೆ ಬರಬೇಕು ಅಂತಾ ಹೇಳಿದ್ದರು ತಜ್ಞರು. ಅದೇ ರೀತಿ ಈಗ ಮಳೆಯ ಆಗಮನ ಆಗಿದೆ. ಅದರಲ್ಲೂ ಕಾವೇರಿ ನದಿಯ ತವರು ಕೊಡಗು ಜಿಲ್ಲೆಯಲ್ಲಿ ಭರ್ಜರಿ ಮಳೆ ಬಂದು, ಭೂಮಿ ಕೆಸರಾಗಿದೆ. ಕಾವೇರಿ ತಾಯಿಯ ಒಡಲಿಗೂ ಭರ್ಜರಿ ನೀರು ಸೇರ್ಪಡೆಯಾಗಿದೆ. ಈ ರೀತಿ ಕರ್ನಾಟಕದ ವಿವಿಧ ಪ್ರದೇಶದಲ್ಲೂ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಮಳೆ ಬಂದ್ರೆ ಸಾಕಪ್ಪಾ ಅಂತಿದ್ದಾರೆ ಜನ. ಕನ್ನಡಿಗರ ಆಸೆಯನ್ನ ವರುಣ ದೇವ ಈಡೇರಿಸುತ್ತಾನಾ? ಅನ್ನೋದನ್ನ ಕಾದು ನೋಡಬೇಕಿದೆ.
ನೀರು ಬೇಕೆಂದು ತಮಿಳುನಾಡು ಕಿರಿಕ್!
ಒಂದ್ಕಡೆ ಕಳೆದ ವರ್ಷ, ಅಂದ್ರೆ 2023ರಲ್ಲಿ ಕರ್ನಾಟಕದಲ್ಲಿ ಸರಿಯಾಗಿ ಮಳೆಯೇ ಬಂದಿಲ್ಲ ಎಂಬ ಕೊರಗು ಕಾಡುತ್ತಿತ್ತು. ಈ ನಡುವೆಯು ತಮಿಳುನಾಡು ಬೇರೆ ನೀರಿಗಾಗಿ ಭಾರಿ ಕಿರಿ, ಕಿರಿ ಮಾಡಿತ್ತು. ಹೀಗಾಗಿ ಕರ್ನಾಟಕ ಕೂಡ ಸಾಕಷ್ಟು ಪ್ರಮಾಣದ ನೀರನ್ನು ತಮಿಳುನಾಡು ರಾಜ್ಯಕ್ಕೆ ಹರಿಸಿತ್ತು. ಇಷ್ಟೆಲ್ಲದರ ಪರಿಣಾಮ ಇದೀಗ ಬೆಂಗಳೂರಿಗೂ ಮುಂದಿನ ದಿನಗಳಲ್ಲಿ, ಕುಡಿಯುವ ನೀರಿಗೆ ಸಂಕಷ್ಟ ಎದುರಾಗುತ್ತಾ? ಎಂಬ ಪ್ರಶ್ನೆ ಕಾಡುತ್ತಿದೆ. ಆದ್ರೆ ಕರ್ನಾಟಕದ ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ 3 ತಿಂಗಳಿಗೆ ಆಗುವಷ್ಟು ನೀರು ಇದೆ ಎಂದು ಸರ್ಕಾರದಿಂದ ಮಾಹಿತಿ ಸಿಗುತ್ತಿದೆ. ಹೀಗಾಗಿ ಬೆಂಗಳೂರಿಗರು ಸೇರಿದಂತೆ ಹಳೇ ಮೈಸೂರು ಭಾಗದ ಜನರು ಇದರಿಂದ ಒಂದಷ್ಟು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ
ಕರ್ನಾಟಕದ ಕರಾವಳಿ ಜಿಲ್ಲೆ ಸೇರಿ ಬೆಂಗಳೂರು ನಗರ, ಬೆಂಗಳೂರು ಗ್ರಾಂ. ರಾಮನಗರ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು & ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಿಂಚನ ಖುಷಿ ಕೊಟ್ಟಿದೆ. ಹಾಗೇ ಇಂದು ಕೂಡ ಭರ್ಜರಿ ಮಳೆ ಬಿದ್ದಿದ್ದು, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಬೀಳುತ್ತೆ ಎಂಬ ಮುನ್ಸೂಚನೆ ನೀಡಲಾಗಿದೆ. ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಮಳೆ ಬೀಳಲಿದೆ ಎನ್ನಲಾಗಿದೆ. ಹೀಗಾಗಿ ಜನರು ಕೂಡ ಫುಲ್ ಖುಷ್ ಆಗಿದ್ದಾರೆ.












Click it and Unblock the Notifications