Rain Alert: ಮಳೆ.. ಮಳೆ.. ಗುಡುಗು & ಸಿಡಿಲು ಗ್ಯಾರಂಟಿ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಶುರು!
ಮಳೆ.. ಮಳೆ.. ಎಲ್ಲಿ ನೋಡಿದರೂ, ಯಾರ ಬಾಯಲ್ಲಿ ಕೇಳಿದರೂ ಬರೀ ಮಳೆಯ ಬಗ್ಗೆ ಮಾತುಕತೆ ನಡೆಯುತ್ತಿದೆ. ಯಾಕಂದ್ರೆ ಕರ್ನಾಟಕದಲ್ಲಿ ಬಿಸಿಲು ನೆತ್ತಿ ಸುಡುತ್ತಾ, ನೀರಿಗಾಗಿ ಪರದಾಟ ಶುರುವಾಗಿದೆ. ಹೀಗಿದ್ದಾಗಲೇ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿಯಾಗಿ ಮಳೆ ಶುರುವಾಗಿದೆ. ಹಾಗಾದ್ರೆ ಕರ್ನಾಟಕದ ಯಾವ ಜಿಲ್ಲೆಯಲ್ಲಿ ಮಳೆ ಶುರುವಾಗಿದೆ? ಬನ್ನಿ ಆ ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ ತಿಳಿಯೋಣ, ಹಾಗೇ ಕರ್ನಾಟಕದಲ್ಲಿ ಬೀಳುತ್ತಿರುವ ಮಳೆಯ ವಿಡಿಯೋ ನೋಡೋಣ.
ಕರ್ನಾಟಕದ ಯಾವುದೇ ಹಳ್ಳಿಗೆ ಹೋಗಿ, ಯಾವುದೇ ನಗರಕ್ಕೆ ಹೋಗಿ ಅಲ್ಲೆಲ್ಲಾ ನೀರಿಗಾಗಿ ದೊಡ್ಡ ಹೋರಾಟವೇ ಶುರುವಾಗಿದೆ. ಜನರು ಪ್ರತಿದಿನ ತಮ್ಮ ಕೆಲಸವನ್ನು ಬಿಟ್ಟು ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಹೀಗಿದ್ದಾಗ ಮಳೆರಾಯ ಕರ್ನಾಟಕ ರಾಜ್ಯದಲ್ಲಿ, ಒಂದಷ್ಟು ಕರುಣೆ ತೋರಿಸಿ ಮಳೆಯನ್ನು ಸುರಿಸಲು ಆರಂಭಿಸಿದ್ದಾನೆ. ಅದರಲ್ಲೂ, ನಮ್ಮ ರಾಜ್ಯದ ಈ ಜಿಲ್ಲೆಗೆ ಭರ್ಜರಿ ಗುಡುಗು ಸಹಿತ ಭಾರಿ ಮಳೆ ಆರಂಭವಾಗಿದೆ. ಹಾಗೇ ನಾಳೆ, ಅಂದ್ರೆ ಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯೂ ಬೀಳಲಿದೆ ಎಂದು ಸೂಚನೆ ನೀಡಲಾಗಿದೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಯಲ್ಲಿ ಮಳೆ ಬರಲಿದೆ? ಬನ್ನಿ ತಿಳಿಯೋಣ.

ಮಳೆ.. ಮಳೆ.. ಭರ್ಜರಿ ಮಳೆ!
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರಕ್ಕೆ ಕೌಂಟ್‌ಡೌನ್ ಶುರುವಾಗಿ, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸುರಿಯಲಿದೆ ಎನ್ನಲಾಗಿದೆ. ಬೆಂಗಳೂರು ನಗರ, ವಿಜಯಪುರ, ರಾಯಚೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ, ತುಮಕೂರು, ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ಮುಂದಿನ 24 ರಿಂದ 48 ಗಂಟೆ ಅವಧಿಯಲ್ಲಿ ರಾಮನಗರ ಚಿಕ್ಕಮಗಳೂರು & ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುತ್ತೆ ಎನ್ನಲಾಗಿದೆ. ಏಪ್ರಿಲ್ 30ರ ನಂತರ ಮಳೆಯ ಅಬ್ಬರ ಶುರು ಆಗಲಿದ್ದು, ಮೇ 3ರ ತನಕ ಈ ಭಾಗಗಳಲ್ಲಿ ಭಾರಿ ಮಳೆ ಮುನ್ಸೂಚನೆ ನಿಡಲಾಗಿದೆ. ಹಾಗೇ ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿಯಾಗೇ, ಮಳೆ ಅಬ್ಬರ ಶುರುವಾಗಿದೆ.
#ಬೆಳಗಾವಿ ಮಳೆ💦💦 pic.twitter.com/IIER24M4xJ
— halu hittanagi (@kinghalu4) April 29, 2024
ಬೆಂಗಳೂರಲ್ಲೂ ಮಳೆಯ ಅಬ್ಬರ?
ಇದೀಗ ಕರ್ನಾಟಕದಲ್ಲಿ ಆದಷ್ಟು ಬೇಗ ಮಳೆ ಬೀಳಬೇಕಿರುವುದು ನಮ್ಮ ರಾಜಧಾನಿಯಾದ ಬೆಂಗಳೂರು ನಗರದಲ್ಲಿ. ಯಾಕೆ ಅಂದ್ರೆ ಬೆಂಗಳೂರಿನಲ್ಲಿ ನೀರು ಇಲ್ಲದೆ ಕೋಟ್ಯಂತರ ಜನ ವಿಲವಿಲ ಒದ್ದಾಡುತ್ತಿದ್ದಾರೆ. ಹೀಗಾಗಿ ಆದಷ್ಟು ಬೇಗ ಮಳೆ ಬಂದು, ಪರಿಸ್ಥಿತಿ ಸರಿಯಾಗಬೇಕು ಇಲ್ಲ ಅಂದ್ರೆ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಗಲಿದೆ. ಮುಂದೆ ಇದು ದುರಂತಕ್ಕೆ ಕೂಡ ನಾಂದಿ ಹಾಡುವ ಅಪಾಯ ಕಾಡುತ್ತಿದೆ.
ಪ್ರಕೃತಿ ಮೇಲೆ ಮನುಷ್ಯರ ದೌರ್ಜನ್ಯ
ಮನುಷ್ಯ ಮಾಡಿದ ತಪ್ಪಿಗೆ ಹಾಗೂ ಪ್ರಕೃತಿ ಮೇಲೆ ಎಸಗುತ್ತಿರುವ ದೌರ್ಜನ್ಯಕ್ಕೆ ಈಗ ಭಾರಿ ದೊಡ್ಡ ಎಡವಟ್ಟುಗಳೇ ನಡೆಯುತ್ತಿವೆ. ಅದನ್ನ ಸರಿ ಮಾಡಲು ಕೂಡ ಆಗುತ್ತಿಲ್ಲ. ಅದರ ಪರಿಣಾಮ ಎನ್ನುವಂತೆ ಮಳೆ ಬೀಳಬೇಕಾದ ಜಾಗದಲ್ಲಿ ಮಳೆ ಬರುತ್ತಿಲ್ಲ, ಇದರ ಬದಲಾಗಿ ಮರುಭೂಮಿ ಸೇರಿದಂತೆ ಮಳೆಯ ಅಗತ್ಯತೆ ಇಲ್ಲದ ಜಾಗದಲ್ಲಿ, ಭರ್ಜರಿ ಮಳೆ ಬರುತ್ತಿದೆ. ಅದ್ರಲ್ಲೂ ದಕ್ಷಿಣ ಭಾರತದ ರಾಜ್ಯಗಳ ಸ್ಥಿತಿ ತುಂಬಾ ಕಠಿಣವಾಗಿದ್ದು, ಮಳೆ ಬೇಕೆ ಬೇಕು ಎಂಬ ವಾತಾವರಣ ಇದೆ. ಹೀಗಿದ್ದಾಗ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆ ಸಿಗುತ್ತಿದೆ.
ಮಳೆ ಯಾಕೆ ಬರ್ತಿಲ್ಲ?
ಮಳೆ ಯಾಕೆ ಬರ್ತಿಲ್ಲ ಅಂದ್ರೆ ಭೂಮಿಯ ತಾಪಮಾನ ಏರಿಕೆ ಹಾಗೂ ಭೂ ವಾತಾವರಣದ ಮೇಲೆ ಮನುಷ್ಯ ನಡೆಸುತ್ತಿರುವ ದೌರ್ಜನ್ಯ ಇದ್ದಕ್ಕೆ ಕಾರಣ ಅಂತಿದ್ದಾರೆ ವಿಜ್ಞಾನಿಗಳು. ಈ ಆರೋಪಗಳ ನಡುವೆ ಮನುಷ್ಯ ತಾನು ಮಾಡಿರುವ ತಪ್ಪಿಗೆ ತಾನೇ ಸಾಯುತ್ತಿದ್ದಾನೆ. ಮಳೆ ಇಲ್ಲದೆ ಪರದಾಡುವ ಪರಿಸ್ಥಿತಿ ಬಂದಿದೆ. ಯಾರೋ ಶ್ರೀಮಂತರು ಮಾಡುವ ತಪ್ಪಿಗೆ ಇದೀಗ ಬಡ ರೈತರು, ಬಡ ಮಧ್ಯಮ ವರ್ಗದ ಜನ ಹನಿ ಹನಿ ನೀರಿಗೂ ಪರತಪಿಸುವ ಪರಿಸ್ಥಿತಿಯು ನಿರ್ಮಾಣ ಆಗಿದೆ. ಹೀಗಿದ್ದಾಗಲೇ ಜನರು ಮಳೆರಾಯನ ಬಳಿ ಹೊಸ ಡಿಮ್ಯಾಂಡ್ ಇಟ್ಟು, ನಮ್ಮ ಬೇಡಿಕೆ ಪೂರೈಸು ಮಳೆರಾಯ ಅಂತಿದ್ದಾರೆ.
ಉಸಿರು ಬಿಗಿಹಿಡಿದು ಕಾಯುತ್ತಿದ್ದಾರೆ!
ಮಳೆ.. ಮಳೆ.. ಮಳೆ.. ನೀರು.. ನೀರು.. ನೀರು.. ಹೀಗೆ ಜನರ ಬಾಯಲ್ಲಿ ಈಗ ಕೇಳಿ ಬರುತ್ತಿರುವ ಎರಡು ಪದ ಎಂದರೆ ಅದು ಮಳೆ & ನೀರು ಮಾತ್ರ. ಯಾಕಂದ್ರೆ ಮಳೆ ಬರದೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬರ ಎದುರಾಗಿದೆ. ಇದರ ಜೊತೆಗೆ ಕುಡಿಯುವ ನೀರು ಕೂಡ ಸಿಗದ ಸ್ಥಿತಿ ಉಂಟಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಹವಾಮಾನ ಇಲಾಖೆ, ಭರ್ಜರಿ ಮಳೆ ಬಗ್ಗೆ ಸಿಹಿ ಸುದ್ದಿ ಕೊಟ್ಟಿದೆ. ಹಾಗಾದ್ರೆ ಕರ್ನಾಟಕದಲ್ಲಿ ಮಳೆ ಶುರುವಾಗುವುದು ಯಾವಾಗ? ಯಾವ ಯಾವ ಜಿಲ್ಲೆಯಲ್ಲಿ ಭರ್ಜರಿ ಮಳೆ ಬೀಳಲಿದೆ? ಅಂತಾ ಇದೀಗ ಕನ್ನಡಿಗರು ಉಸಿರು ಬಿಗಿಹಿಡಿದು ಕಾಯುತ್ತಿದ್ದಾರೆ.
ಎಸಿ ಸಿಟಿ ಬೆಂಗಳೂರಲ್ಲಿ ನರಳಾಟ!
ಬೆಂಗಳೂರು ಅಂದ್ರೆ 20 ವರ್ಷಗಳ ಹಿಂದೆ ಎಸಿ ಸಿಟಿ ಎಂಬ ಹೆಸರು ಇತ್ತು. ಯಾಕಂದ್ರೆ ಈ ನಮ್ಮ ಬೆಂಗಳೂರು ಬೇಸಿಗೆ ಸಮಯದಲ್ಲೂ ಕೂಲ್ ಕೂಲ್ ಆಗಿ ಇರೋದು. ಆದರೆ ಏನ್ ಮಾಡೋದು, ಬೆಂಗಳೂರು ಈಗ ಕಾಂಕ್ರಿಟ್ ಕಾಡು ಆಗಿದೆ. ಬೆಂಗಳೂರಿನಲ್ಲಿ ಇದ್ದ ಗಿಡ & ಮರ ಎಲ್ಲಾ ನಾಶವಾಗಿ ಹೋಗುತ್ತಿವೆ. ಹೀಗಾಗಿ ಬೆಂಗಳೂರಿನಲ್ಲಿ ಅಂತರ್ಜಲ ಕೂಡ ಕುಸಿದು ಹೋಗಿ, ಕೋಟ್ಯಂತರ ಜನ ನರಳುತ್ತಿದ್ದಾರೆ. ಈ ನಡುವೆ ಮಳೆ ಬೇಕು, ಮಳೆ ಬೇಕು ಅಂತ ದೇವರ ಮೊರೆ ಹೋಗುವ ಪರಿಸ್ಥಿತಿ ಕೂಡ ಬಂದಿದೆ. ಆದ್ರೂ ವರುಣ ದೇವ ಮಾತ್ರ ನಮ್ಮ ಜನರ ಮಾತಿಗೆ ಬೆಲೆ ಕೊಟ್ಟು ಮಳೆ ಸುರಿಸುತ್ತಿಲ್ಲ. ಆದರೆ ಮೇ ತಿಂಗಳಲ್ಲಿ ಭರ್ಜರಿ ಮಳೆ, ಸುರಿಯುವ ಮುನ್ಸೂಚನೆ ಇದೆ.
ಮಳೆ ನೀರು ಸಂಗ್ರಹ ಮಾಡಿ
ಮನುಷ್ಯನ ಬದುಕಿಗೆ ಮೂಲ ಆಧಾರವೇ ನೀರು, ನೀರು ಇಲ್ಲದೆ ಮನುಷ್ಯನ ಜೀವನ ಊಹೆಗೂ ನಿಲುಕುವುದಿಲ್ಲ. ಹೀಗಾಗಿ ಜೀವಜಲ ಅಂತಾ ಕರೆಯುವ ನೀರನ್ನು ಮನುಷ್ಯ ಸೂಕ್ತ ರೀತಿಯಲ್ಲಿ ಸಂಗ್ರಹ ಮಾಡಿಕೊಳ್ಳಬೇಕು. ಹೀಗಿದ್ರೂ ಮನುಷ್ಯರು ಮಾತ್ರ ನೀರಿನ ಸದ್ಬಳಕೆ ಮಾಡಿಕೊಳ್ತಿಲ್ಲ. ಇದೇ ಕಾರಣಕ್ಕೆ ಮನುಷ್ಯ ಈಗ ಹನಿ ಹನಿ ನೀರಿಗೂ ಪರದಾಡುತ್ತಿದ್ದಾನೆ. ಹೀಗಿದ್ದಾಗ ತಕ್ಷಣಕ್ಕೇ ಎಚ್ಚೆತ್ತುಕೊಂಡು, ಮಳೆ ನೀರು ಸಂಗ್ರಹ ಮಾಡಿಕೊಂಡರೆ ಮುಂದಕ್ಕೆ ಇಂತಹ ಸಮಸ್ಯೆ ಬರಲ್ಲ ಎಂಬ ಮಾತು ಕೇಳಿಬರುತ್ತಿದೆ. ಯಾಕಂದ್ರೆ ಮಳೆಗಾಲದ ಆರಂಭಕ್ಕೆ ಇನ್ನು ಕೇವಲ 1 ತಿಂಗಳು ಬಾಕಿ ಇದೆ. ಹೀಗಾಗಿ ಮಳೆ ನೀರು ಸಂಗ್ರಹಕ್ಕೆ ಈಗಲಾದರೂ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಿ.
ಮಳೆ.. ಮಳೆ.. ಮಳೆ!
ನಿನ್ನೆ ಕನ್ನಡಿಗರ ರಾಜಧಾನಿ ಬೆಂಗಳೂರಲ್ಲಿ ಬಂದ ಭಾರಿ ಮಳೆ ನೆಮ್ಮದಿ ನೀಡಿತ್ತು. ಅದರಲ್ಲೂ ಇಷ್ಟು ದಿನ ಮಳೆ ಇಲ್ಲದೆ ಪರದಾಡಿದ್ದ ನಮ್ಮ ಜನರಿಗೆ, ಭರ್ಜರಿ ಮಳೆಯ ರಸದೌತಣ ಸಿಕ್ಕಿತು. ನೋಡ ನೋಡುತ್ತಲೇ ಇಡೀ ಬೆಂಗಳೂರಿಗೆ ಮುತ್ತಿಗೆ ಹಾಕಿದ ಮಳೆ ಮೋಡಗಳು, ಗಂಟೆಗಟ್ಟಲೇ ಮಳೆ ಸುರಿಸಿದವು. ಈ ಮೂಲಕ ಭರ್ಜರಿ ಮಳೆ ಕಂಡು, ಜನರು ಕೂಡ ಕುಣಿದಾಡಿದರು. ಹಾಗೇ ಮಂಡ್ಯ & ಮೈಸೂರು ಭಾಗದಲ್ಲಿ ಕೂಡ ಭಾರಿ ಮಳೆ ತಂಪು ಹರಿಸಿದೆ. ಕಾವೇರಿಯ ಮಡಿಲಿನಲ್ಲಿ ಇದ್ದರೂ ನೀರು ಇಲ್ಲದೆ ನರಳಿದ್ದರು ಕನ್ನಡಿಗರು. ಅದ್ರಲ್ಲೂ ಹಳೇ ಮೈಸೂರು ಭಾಗದಲ್ಲಿ ಕೂಡ ಕಾವೇರಿ ನದಿ ಬತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿಯೇ, ಮಳೆ ಬರಲಿ ಅಂತಾ ಜನರು ಪ್ರಾರ್ಥನೆ ಮಾಡುತ್ತಿದ್ದರು.
ಪ್ರಕೃತಿ ಮೇಲೆ ದೌರ್ಜನ್ಯ ನಡೆಸುತ್ತಿದ್ದರೆ...
ಮನುಷ್ಯ ಕ್ರೂರಿ ಆಗುತ್ತಿದ್ದು, ಪ್ರಕೃತಿ ವಿರುದ್ಧ ತನ್ನ ಕ್ರೂರ ನೀತಿಗಳನ್ನು ಅನ್ವಯಿಸುತ್ತಿದ್ದಾನೆ. ಇದೇ ಕಾರಣಕ್ಕೆ ಇದೀಗ ಮಳೆ ಸರಿಯಾದ ಸಮಯಕ್ಕೆ ಬರದ ಪರಿಸ್ಥಿತಿ ನಿರ್ಮಾಣ ಆಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಕೈಮೀರಿ ಹೋಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ವಿಜ್ಞಾನಿಗಳು ಹಾಗೂ ತಜ್ಞರು ಕೂಡ ಎಚ್ಚರಿಕೆ ಸಂದೇಶ ರವಾನೆ ಮಾಡಿದ್ದು ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸುತ್ತಿದ್ದಾರೆ. ಆದರೆ ಮನುಷ್ಯ ಮಾತ್ರ ತನ್ನ ದುರಾಸೆಯ, ಮತ್ತು ದುರ್ಬುದ್ಧಿಯ ಮಿತಿ ಮೀರಿದ್ದು ಸಮಸ್ಯೆಗೆ ದಾರಿ ಮಾಡಿಕೊಟ್ಟಿದೆ. ಹೀಗಾಗಿ ಮುಂದೆ ಮನುಷ್ಯರ ಬದುಕಿಗೆ ಇದು ಸಮಸ್ಯೆ ಎದನ್ನಲಾಗುತ್ತಿದೆ. ಪರಿಸರ ಸಂರಕ್ಷಕರು ಕೂಡ ಇದೇ ವಿಚಾರವಾಗಿ ಈಗ ಚರ್ಚೆ ಮಾಡುತ್ತಿದ್ದಾರೆ, ಹೀಗಾಗಿ ಇದೆಲ್ಲಾ ಏನಾಗುತ್ತೆ ಎಂಬ ಚಿಂತೆಯು ಹಬ್ಬಿದೆ.
ತಂಪು.. ತಂಪು.. ಕೂಲ್.. ಕೂಲ್..!
ಮಳೆ.. ಮಳೆ.. ಭರ್ಜರಿ ಮಳೆ ಬಂದಿದ್ದು, ಭೂತಾಯಿ & ಮನಸ್ಸು ಎರಡೂ ತಂಪಾಗಿದೆ. ಎಲ್ಲೆಲ್ಲೂ ಮಳೆಯ ಅಬ್ಬರ ಜೋರಾಗಿದೆ. ಕೆಲವೇ ಕೆಲವು ದಿನಗಳ ಹಿಂದೆ ಕರ್ನಾಟಕದಲ್ಲಿ ಎಲ್ಲಾ ಜಿಲ್ಲೆಗಳ ಜನರು ಭಾರಿ ಬಿಸಿಲು & ಬಿಸಿಯಾದ ಗಾಳಿಗೆ ನಲುಗಿ ಹೋಗಿದ್ದರು. ಮನೆ ಮೇಲೆ ಇರುವ ನೀರಿನ ಟ್ಯಾಂಕರ್ ಕೂಡ ಕರಗಿ ಹೋಗುವಷ್ಟು, ಮನೆಯಲ್ಲಿ ಬರುವ ನಲ್ಲಿ ನೀರು ಕೂಡ ಕುದಿಯುವಷ್ಟು ಬಿಸಿಲು ಇತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದ್ದು, ತಂಪು ತಂಪು ಕೂಲ್.. ಕೂಲ್.. ಆಗಿದೆ ನಮ್ಮ ಕರ್ನಾಟಕ. ಹಾಗಾದರೆ ಇನ್ನೂ ಎಷ್ಟು ದಿನಗಳ ಕಾಲ ವಾತಾವರಣ ಹೀಗೆ ಇರಲಿದೆ ಗೊತ್ತಾ?
ಮುಂಗಾರು ಮಳೆ ಅಬ್ಬರ ಶುರು!
ಮೇ 31ಕ್ಕೆ ಮುಂಗಾರು ಮಳೆಯ ಮಾರುತಗಳು ಕೇರಳ ರಾಜ್ಯಕ್ಕೆ ಎಂಟ್ರಿ ಕೊಡಲಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಡೀ ಭಾರತದ ಮಳೆಯ ಪಾಲಿನಲ್ಲಿ ಶೇ. 70 ರಷ್ಟು ಮಳೆಯನ್ನ ಮುಂಗಾರು ಮಳೆ ಒಂದೇ ಸುರಿಸುತ್ತದೆ. ಹೀಗಾಗಿ ಮುಂಗಾರು ಮಳೆ ಕರ್ನಾಟಕ ಸೇರಿ ಇಡೀ ಭಾರತಕ್ಕೆ ಅತ್ಯಂತ ಮುಖ್ಯವಾಗಿದೆ. ಹೀಗಿದ್ದಾಗಲೇ 2023 ರಲ್ಲಿ ಮುಂಗಾರು ಮಳೆ ಕೈಕೊಟ್ಟು ಹೋಗಿತ್ತು. ಹೀಗಾಗಿ ಭೀಕರ ಬರ ಎದುರಾಗಿ ರೈತರು & ಜನ ನರಳಿದ್ದರು. ಆದ್ರೆ ಈಗ ಗುಡ್ ನ್ಯೂಸ್ ಸಿಗುತ್ತಿದ್ದು, ಮುಂಗಾರು ಮಳೆ ಅಬ್ಬರ ಗ್ಯಾರಂಟಿ ಆಗುತ್ತಿದೆ.












Click it and Unblock the Notifications