Rain Alert: ಮಳೆ.. ಮಳೆ.. ಬೀಳಲಿದೆ ಭರ್ಜರಿ ಮಳೆ!
ಮಳೆಯೇ ಇಲ್ಲ, ಮಳೆ ಬಾರದೆ ಭೂಮಿ ಒಣಗಿ ಹೋಗಿದೆ. ಅದರಲ್ಲೂ ನಮ್ಮ ಬೆಂಗಳೂರು ಹನಿ ಹನಿ ನೀರಿಗೂ ಪರದಾಡುವ ಪರಿಸ್ಥಿತಿಗೆ ತಲುಪಿದೆ. ಹೀಗಿದ್ದಾಗ ಮಳೆ ಬರಲೇಬೇಕಿದೆ. ಇಲ್ಲವಾದರೆ ಪರಿಸ್ಥಿತ ಕೈಮೀರಿ ಹೋಗುವ ಎಲ್ಲಾ ಲಕ್ಷಣ ಕಾಣುತ್ತಿದೆ. ಇಂತಹ ಸಮಯದಲ್ಲೇ ಜನರಿಗೆ ಗುಡ್ ನ್ಯೂಸ್ ಸಿಗುತ್ತಿದೆ. ಹಾಗಾದರೆ ಕರ್ನಾಟಕದಲ್ಲಿ ಯಾವಾಗ ಮಳೆ ಬರುತ್ತದೆ? ಇದೀಗ ಹವಾಮಾನ ಇಲಾಖೆ ಹೇಳುತ್ತಿರುವಂತೆ ಬೆಂಗಳೂರಿನಲ್ಲಿ ಮಳೆ ಯಾವಾಗ? ಇಂದು & ನಾಳೆ ಭರ್ಜರಿ ಮಳೆ ಬೀಳುವ ಜಿಲ್ಲೆಗಳು ಯಾವುವು? ಬನ್ನಿ ತಿಳಿಯೋಣ.
ಕರ್ನಾಟಕದಲ್ಲಿ 2023ನೇ ವರ್ಷ ತೀವ್ರ ಬರಕ್ಕೆ ಸಾಕ್ಷಿಯಾಗಿತ್ತು, ಹೀಗಾಗಿ ಕುಡಿಯುವ ನೀರಿಗೂ ಬೇಸಿಗೆಯಲ್ಲಿ ಸಮಸ್ಯೆ ಕಾಡ್ತಿದೆ. ಕರ್ನಾಟಕದ ಬಹುತೇಕ ಜಲಾಶಯಗಳು ಬತ್ತಿ ಹೋಗಿದ್ದು, ಈ ಹಿನ್ನೆಲೆ ಇದೀಗ ಸುರಿಯುವ ಮಳೆ ಕಾವೇರಿ ಕೊಳ್ಳದ ಡ್ಯಾಂ ಭರ್ತಿ ಮಾಡುತ್ತಾ? ಎಂಬ ಆಸೆಯು ಮೂಡಿದೆ. ಆದರೆ ಬೇಸಿಗೆಯಲ್ಲಿ ಎಷ್ಟೇ ಮಳೆ ಸುರಿದರೂ ಕಾವೇರಿ ನದಿಯ ಒಡಲು ತುಂಬಿ ತುಳುಕುವ ಸಾಧ್ಯತೆ ಕಡಿಮೆ. ಹೀಗಿದ್ದಾಗ ಕರ್ನಾಟಕದಲ್ಲಿ ಮಳೆ ಬರುತ್ತಾ? ಬರೋದಿಲ್ವಾ? ಅಂತಾ ರೈತರು & ಜನ ಚಿಂತೆಯಲ್ಲಿ ಮುಳುಗಿ ಹೋಗಿರುವಾಗಲೇ ಮಳೆಯ ಅಬ್ಬರ ಕೂಡ ಶುರುವಾಗಿದೆ.

ಕರ್ನಾಟಕದಲ್ಲಿ ಮಳೆಯ ಅಬ್ಬರ ಶುರು
ಹೌದು, ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೆಲ್ಲಗೆ ಮಳೆಯ ಸಿಂಚನ ಆಗುತ್ತಿದೆ. ಅದೇ ರೀತಿ ಮಾರ್ಚ್ 31ರ ಬಳಿಕ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತೆ ಎಂಬ ಮುನ್ಸೂಚನೆ ನೀಡಲಾಗಿದೆ. ಈಗಿನ ವಾತಾವರಣದ ಪರಿಸ್ಥಿತಿ ಗಮನಿಸುತ್ತಿದ್ದರೆ ಮಲೆನಾಡು ಭಾಗ ಮತ್ತು ಕರಾವಳಿ ಪ್ರದೇಶವೂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತದೆ ಎನ್ನಲಾಗಿದೆ. ಹಾಗಾದರೆ, ಈ ರೀತಿ ಭರ್ಜರಿಯಾಗಿ ಮಳೆ ಬೀಳುವ ಕರ್ನಾಟಕದ ಜಿಲ್ಲೆಗಳು ಯಾವುವು? ಈಗ ಯಾವ ಪ್ರದೇಶದಲ್ಲಿ ಇಂದು & ನಾಳೆ ಭರ್ಜರಿ ಮಳೆ ಬೀಳುತ್ತೆ? ಮುಂದೆ ಓದಿ.
ಮಳೆಯ ಅಬ್ಬರಕ್ಕೆ ಜನ ತತ್ತರ!
ಇನ್ನು ಈಗ ಹವಾಮಾನ ತಜ್ಞರು ನೀಡಿರುವ ಮಾಹಿತಿಯ ಪ್ರಕಾರ ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಮಾರ್ಚ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಅಂತಾ ಹವಾಮಾನ ತಜ್ಞರಿಂದ ಮುನ್ಸೂಚನೆ ಸಿಕ್ಕಿದೆ. ಇದಕ್ಕೆ ಪೂರಕವಾಗಿ ಈಗಾಗಲೇ ಕಾವೇರಿ ನದಿಯ ತವರು ಜಿಲ್ಲೆ ಕೊಡಗು ಸೇರಿದಂತೆ ಚಿಕ್ಕಮಗಳೂರು, ಹುಬ್ಬಳ್ಳಿ & ಧಾರವಾಡ ಸೇರಿ ಗಡಿನಾಡು ಬೆಳಗಾವಿ ಜಿಲ್ಲೆಯಲ್ಲೂ ಭಾರಿ ಮಳೆ ಬಿದ್ದಿದೆ. ಇನ್ನೇನು ಕೆಲವೇ ದಿನದಲ್ಲಿ ಈ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗುವ ನಿರೀಕ್ಷೆ ಇದೆ. ಮತ್ತೊಂದು ಕಡೆ ನಮ್ಮ ದೇಶದ ಈ ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಮತ್ತೊಂದು ಕಡೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಸೇರಿ ಈಶಾನ್ಯ ಭಾರತದಲ್ಲಿ ಗುಡುಗು ಸಹಿತವಾದ ಸಾಧಾರಣ ಮಳೆಯು ಆಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅತ್ತ ಗಂಗಾನದಿ ಪ್ರದೇಶವೂ ಸೇರಿದಂತೆ ಪಶ್ಚಿಮ ಬಂಗಾಳದಲ್ಲಿ ಇಂದು ಗುಡುಗು ಸಹಿತ ಲಘು ಮಳೆ ಸುರಿಯುವ ನಿರೀಕ್ಷೆ ಇದೆ.

ಗುಡುಗು & ಮಿಂಚು ಸಹಿತ ಮಳೆ
ಇನ್ನು ಹವಾಮಾನ ಇಲಾಖೆ ಈಗ ನೀಡಿದ ಮುನ್ಸೂಚನೆ ಪ್ರಕಾರ ಅಸ್ಸಾಂ & ಮೇಘಾಲಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಸುರಕ್ಷಿತವಾಗಿ ಇರುವಂತೆ ಸೂಚನೆ ನೀಡಲಾಗಿದೆ. ಜೊತೆಯಲ್ಲಿ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲೂ, ಮಾರ್ಚ್ 27ನೇ ದಿನಾಂಕವಾದ ಇಂದು ಗುಡುಗು ಮತ್ತು ಮಿಂಚು ಸಹಿತ ಮಳೆ ಬೀಳುವ ನಿರೀಕ್ಷೆ ಇದೆ ಎನ್ನಲಾಗಿದೆ. ಹಾಗೇ, ನಾಳೆಯೂ ಮಳೆ ಅಬ್ಬರ ಈ ಪ್ರದೇಶಗಳಲ್ಲಿ ಮುಂದುವರಿಯಲಿದೆ.
ಧಗಧಗ ಬಿಸಿಲಿನ ನಡುವೆ ಮಳೆ!
ಹೌದು ಕರ್ನಾಟಕದ ಕರಾವಳಿ ಜಿಲ್ಲೆ ಸೇರಿ, ಬೆಂಗಳೂರು ನಗರ & ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಬಿಸಿಲು ಕಾಡುತ್ತಿದೆ. ಹೀಗಿದ್ದಾಗ ಕರ್ನಾಟಕದ ಕೆಲವು ಪ್ರದೇಶದಲ್ಲಿ ಭರ್ಜರಿ ಮಳೆ ಒಂದಷ್ಟು ತಂಪು ತಂಪು ಕೂಲ್ ಕೂಲ್ ಮಾಡಿದೆ.
ಕರ್ನಾಟಕದ ಜನರಿಗೆ ನೀರು ಅನ್ನೋದು ಚಿನ್ನಕ್ಕೆ ಸಮಾನ ಆಗಿದೆ. ದಕ್ಷಿಣ ಕರ್ನಾಟಕದಿಂದ ಹಿಡಿದು, ಉತ್ತರ ಕರ್ನಾಟಕದ ತನಕ. ಮಲೆನಾಡಿನ ಜಿಲ್ಲೆಗಳಿಂದ ಹಿಡಿದು, ಕರಾವಳಿಯ ಭಾಗದ ತನಕ ಎಲ್ಲೆಲ್ಲೂ ನೀರಿಗೆ ಭಾರಿ ಸಂಕಷ್ಟ ಎದುರಾಗಿದೆ. ಪರಿಸ್ಥಿತಿ ಕೈಮೀರಿ ಹೋದ ಕಾರಣಕ್ಕೆ ಈಗ ಮಳೆ ಬೀಳಲೇಬೇಕು ಎನ್ನುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ ಡ್ಯಾಂಗಳಲ್ಲಿ ಕೂಡ ನೀರು ಖಾಲಿ ಆಗಿ ಜಲಾಶಯಗಳು ಒಣಗಿ ಹೋಗುತ್ತಿವೆ. ಪರಿಸ್ಥಿತಿ ಕೈಮೀರಿ ಹೋದ ಸಮಯದಲ್ಲಿ ಮಳೆ ಬೀಳಲೇಬೇಕು ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಹಿನ್ನೆಲೆ ಇನ್ನು ಕೆಲವೇ ದಿನದಲ್ಲಿ ಮಳೆ ಬೀಳುವ ನಿರೀಕ್ಷೆ ಕೂಡ ಮೂಡಿದೆ.












Click it and Unblock the Notifications