ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 19,20ಕ್ಕೆ ರಾಜ್ಯದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

By Nayana
|
Google Oneindia Kannada News

ಬೆಂಗಳೂರು, ಮೇ 16: ಇನ್ನೂ ಮಳೆಗಾಲ ಆರಂಭವಾಗಿಲ್ಲ ಆದರೆ ಮುಂಗಾರು ಪೂರ್ವ ಮಳೆಯಿಂದಾಗಿ ಬೆಂಗಳೂರು ಸೇರಿದಂತೆ ಹಲವಾರು ಕಡೆಗಳಲ್ಲಿ ಉಷ್ಣಾಂಶದ ಪ್ರಮಾಣ ತಗ್ಗಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ , ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಹಾಸನ ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 19 ಮತ್ತು 20 ರಂದು ಭಾರಿ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಇನ್ನೂ ಎರಡು ದಿನ ಅಬ್ಬರಿಸಲಿದೆ ಚಂಡಮಾರುತಇನ್ನೂ ಎರಡು ದಿನ ಅಬ್ಬರಿಸಲಿದೆ ಚಂಡಮಾರುತ

ತಮಿಳುನಾಡು ಪ್ರದೇಶದಲ್ಲಿ ನಿರ್ಮಾಣವಾಗಿರುವ ಮೇಲ್ಮೈ ಸುಳಿಗಾಳಿ ಮತ್ತು ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇ ನಿರ್ಮಾಣವಾಗಿರುವ ಪ್ರಭಾವದಿಂದ ಮುಂಗಾರು ಪೂರ್ವ ಮಳೆ ಮತ್ತಷ್ಟು ಚುರುಕಾಗಿದೆ.

Heavy rain warn on May 19 and 20

ಮಾಸಾಂತ್ಯದವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮಳೆ ಚುರುಕಾಗಿದ್ದು, ಮಂಗಳವಾರ ಬೆಳಗ್ಗೆ 8.30ರವರೆಗೆ ಉತ್ತರ ಕನ್ನಡದ ಮಂಕಿಯಲ್ಲಿ 6ಸೆಂ.ಮೀ ಮಳೆಯಾಗಿದೆ.

ಚಿತ್ರದುರ್ಗ, ಹಾವೇರಿ, ಆಲೂರಿನಲ್ಲಿ ತಲಾ 5ಸೆಂ.ಮೀ, ಹಾಸನ, ದಾವಣಗೆರೆ, ಮಂಚಿಕೇರಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಬೆಂಗಳೂರಿನಲ್ಲಿ ಮಂಗಳೌಆರ ಸಂಜೆ ಗುರುಗು ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಮಾ.1ರಿಂದ ಮೇ 15ರವರೆಗೆ ನಗರದಲ್ಲಿ 241 ಮಿ.ಮೀ ಮಳೆಯಾಗಿದೆ.

ಮೀನುಗಾರರಿಗೆ ಎಚ್ಚರಿಕೆ: ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗುರುವಾರದ ವೇಳೆಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ನಿರ್ಮಾಣವಾಗುವ ಸಾಧ್ಯತೆ ಇದೆ. ಆದರೆ ಕರಾವಳಿ ಭಾಗಕ್ಕೆ ಯಾವುದೇ ಅಪಾಯವಿಲ್ಲ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಗರಿಷ್ಠ ಶೇ.32.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.7ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 32.3ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 31.8ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.8ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ ಉಷ್ಣಾಂಶ ಸ್ವಲ್ಪ ತಗ್ಗಿದ್ದು ಗರಿಷ್ಠ 39.1ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

English summary
Indian Meteorological Department has warned that heavy rainfall in Bengaluru and south interior Karnataka on May 19 and 20 due to depression in Arabian peninsula.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X