ಕರಾವಳಿಯಲ್ಲಿ ಇನ್ನೂ ಎರಡು ದಿನ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು, ಆಗಸ್ಟ್ 16: ಕರಾವಳಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರೆಯಲಿದೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ಕೆಲ ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಕಡೆ ಭೂ ಕುಸಿತ, ಗುಡ್ಡ ಕುಸಿತಗಳಾಗಿವೆ, ಮಳೆಗೆ ಕೆಲ ಜೀವಗಳೂ ಬಲಿಯಾಗಿವೆ, ಕೆಲವರು ಮನೆ ಕಳೆದುಕೊಂಡಿದ್ದಾರೆ.
ಇದೇ ಭೀಕರ ಮಳೆ ಇನ್ನೂ ಎರಡು ಮುಂದುವರೆಯಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕರಾವಳಿ ಜಿಲ್ಲೆ ಮಾತ್ರವಲ್ಲದೆ ಇಂದಿನಿಂದ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿಯೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಿನಲ್ಲೂ ಇನ್ನೂ ಕೆಲವು ದಿನ ಮೋಡ ಮುಸುಕಿದ ವಾತಾವರಣ ಇರಲಿದ್ದು, ಆಗಾಗ ಮಳೆಯಾಗುವ ಸಾಧ್ಯತೆ ಇದೆ.
ಮಳೆ ಪೀಡಿತ ಪ್ರದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ರಕ್ಷಿಸಲು ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಅಗತ್ಯ ಇದ್ದಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲು ಸೂಚಿಸಿದ್ದಾರೆ.












Click it and Unblock the Notifications