Heavy Rain: ಹಿಂಗಾರು ಮಳೆ ಅಬ್ಬರ; ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಆಗ್ನೇಯ ಬಂಗಾಳ ಮಹಾಸಾಗರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಅಕ್ಟೋಬರ್ 22ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಆ ನಂತರ ಮಳೆಯ ತೀವ್ರತೆ ಕಡಿಮೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇಂದಿನಿಂದ (ಗುರುವಾರ) ಅಕ್ಟೋಬರ್ 22ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ನಂತರ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

Heavy Rain will continues untill october 22nd in Karnataka

ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರ್ಗಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಆರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹೇಳಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಅಕ್ಟೋಬರ್ 23ರವರಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 115.5 ಮಿ.ಮೀ - 204.5 ಮಿ.ಮೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೋಟೆ ನಾಡು ಚಿತ್ರದುರ್ಗ ಜೆಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ನೌಕರರಿಗೆ ಕರ್ತವ್ಯಗಳಿಗೆ ಹೋಗಲು ಕಿರಿಕಿರಿ ಉಂಟಾಗಿದೆ. ಹಿರಿಯೂರು, ಚಳ್ಳಕೆರೆ ಚಿತ್ರದುರ್ಗ ಭಾಗ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದೆ.

ರೈತರ ದೈನಂದಿನ ಕೃಷಿ ಚಟುವಟಿಕೆಗಳ ಕರ್ತವ್ಯಕ್ಕೆ ಅಡ್ಡಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ರೈತರು ಶೇಂಗಾ ಕೀಳಲು ಮಳೆ ಅಡ್ಡಿಯಾಗುತ್ತಿದೆ. ಈ ಮಳೆಯಿಂದ ಶೇಂಗಾ ಬೆಳೆಗಾರರು ಆತಂಕದಲ್ಲಿದ್ದಾರೆ.

ಬೆಂಗಳೂರಿನಲ್ಲಿ ಮಳೆಯಿಂದಾಗಿ ಸಾಕಷ್ಟು ಸಮಸ್ಯೆಯಾಗಿದೆ. ಹಲವು ಕಡೆಗಳಲ್ಲಿ ರಸ್ತೆಗಳಲ್ಲಿ ಮೊಣಕಾಲುದ್ದ ನೀರು ನಿಂತರೆ, ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಾನ್ಯತಾ ಟೆಕ್ ಪಾರ್ಕ್, ಮಾಲ್ ಆಫ್ ಏಷ್ಯಾ ಸೇರಿದಂತೆ ಪ್ರತಿಷ್ಠಿತ ಪ್ರದೇಶಗಳಲ್ಲು ನೀರು ನುಗ್ಗಿದ್ದು ಜನ ಪರದಾಡುವಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+