Karnataka Rains: ಹಿಂಗಾರು ಆರ್ಭಟಕ್ಕೆ ರಾಜ್ಯವೇ ತತ್ತರ; ಕರ್ನಾಟಕದ 12 ಜಿಲ್ಲೆಗಳಲ್ಲಿ ಬಾರೀ ಮಳೆ
ಬೆಂಗಳೂರು, ಅಕ್ಟೋಬರ್ 08: ರಾಜ್ಯದಲ್ಲಿ ಈ ಬಾರಿ ಮುಂಗಾರು ಆರ್ಭಟದಂತೆ ಹಿಂಗಾರು ಮಳೆ ಆರ್ಭಟಕ್ಕೆ ಇಡೀ ರಾಜ್ಯವೇ ತತ್ತರಿಸಿದ್ದು, ರಾಜಧಾನಿ ಬೆಂಗಳೂರಿನ ಹಲವೆಡೆ ಸೋಮವಾರ ಮರಗಳು ಧರೆಗುರುಳಿದ್ದು, ಅಲ್ಲಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಕಳೆದು ಒಂದು ತಿಂಗಳು ಬಿಡುವು ಕೊಟ್ಟಿದ್ದ ವರುಣ ಮತ್ತೆ ಅಬ್ಬರಿಸಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಭಾರೀ ಮಳೆಯಾಗಲಿದೆ.

ಕರ್ನಾಟಕದ ವಿವಿಧೆಡೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಆರೆಂಜ್ಅಲರ್ಟ್ ಘೋಷಿಸಿದೆ. ಅಲ್ಲದೇ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.
ಬಾಗಲಕೋಟೆ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯನಗರದಲ್ಲಿ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.












Click it and Unblock the Notifications