Karnataka Rains: ಕರ್ನಾಟಕದ 23 ಜಿಲ್ಲೆಗಳಲ್ಲಿ ಆಗಸ್ಟ್​ 27ರವರೆಗೂ ಭಾರಿ ಮಳೆ: ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

ಬೆಂಗಳೂರು, ಆಗಸ್ಟ್‌ 21: ಕಳೆದ ವರ್ಷಕ್ಕಿಂತ ಈ ವರ್ಷ ರಾಜ್ಯದಲ್ಲಿ ಭರ್ಜರಿ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕರ್ನಾಟಕದ 23 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಾದ್ಯಂತ ಆಗಸ್ಟ್​ 27ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Heavy Rain Will Occur In 23 Districts Of Karnataka Said The Meteorological Department

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಉತ್ತರ ಒಳನಾಡು ಜಿಲ್ಲೆಗಳಿಗೆ ಆಗಸ್ಟ್ 25 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಹಾಗೂ ಆಗಸ್ಟ್ 24 ರವರೆಗೆ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

General Motors Layoffs: ಜನರಲ್ ಮೋಟಾರ್ಸ್‌ನಲ್ಲಿ ಜಾಗತಿಕವಾಗಿ 1,000 ನೌಕರರ ವಜಾ

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ, ಇಂದು ಕೂಡ ಮೋಡ ಕವಿದ ವಾತಾವರಣವಿದೆ. ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಹಾವೇರಿ, ಧಾರವಾಡ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ. ಗಂಗಾವತಿ, ಕುರ್ಡಿ, ಬೆಳ್ಳೂರು, ಕಂಪ್ಲಿ, ಮಾನ್ವಿ, ಕುಡತಿನಿಯಲ್ಲಿ ಹೆಚ್ಚು ಮಳೆಯಾಗಿದೆ. ರಾಯಚೂರು, ಮಸ್ಕಿ, ಸಿರಗುಪ್ಪ, ಗುಬ್ಬಿ, ಬಾಳೆಹೊನ್ನೂರು, ಕಡೂರು, ಹುಣಸಗಿ, ಅಡಕಿ, ಲೋಂಡಾ, ಹೊಸಪೇಟೆ, ಗೌರಿಬಿದನೂರು, ಬಳ್ಳಾರಿ, ಹರಪನಹಳ್ಳಿ, ಕುಮಟಾ, ಸೇಡಂ, ಹುಮನಾಬಾದ್, ದಾವಣಗೆರೆ, ದೊಡ್ಡಬಳ್ಳಾಪುರ, ಮಧುಗಿರಿ, ದಾವಣಗೆರೆ, ಕೃಷ್ಣರಾಜಪೇಟೆಯಲ್ಲಿ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+