Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಆಗಸ್ಟ್ 28ರವರೆಗೂ ಭಾರಿ ಮಳೆ
ಬೆಂಗಳೂರು, ಆಗಸ್ಟ್ 22: ಕರ್ನಾಟಕದಲ್ಲಿ ಕೆಲ ದಿನಗಳ ಹಿಂದೆ ಎರಡನೇ ಹಂತದ ಮುಂಗಾರು ಪ್ರಾರಂಭವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ.ಇನ್ನೂ ನಾಲ್ಕೈದು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ.ಇಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಆಗಸ್ಟ್ 25 ರವರೆಗೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ. ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 28ರವರೆಗೂ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗ, ಹಿರಿಯೂರು, ಕುಣಿಗಲ್, ಗುಂಡ್ಲುಪೇಟೆ, ಚಿಂತಾಮಣಿ, ಕೋಲಾರ, ಶಿಗ್ಗಾಂವ್, ಅಜ್ಜಂಪುರ, ಗುಬ್ಬಿ, ಕೊಟ್ಟೂರು, ಮುಂಡರಗಿ, ಕೂಡ್ಲಿಗಿ, ಸೇಡಬಾಳ, ಸಂಡೂರು, ಕಳಸ, ಹಡಗಲಿ, ಜಯಪುರ, ತಿಪಟೂರು, ನಾಪೋಕ್ಲು, ಬಳ್ಳಾರಿ, ಹರಪನಹಳ್ಳಿ, ದಾವಣಗೆರೆ, ಹಗರಿಬೊಮ್ಮನಹಳ್ಳಿ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ತ್ಯಾಗರ್ತಿ, ನಾಯಕನಹಟ್ಟಿ, ಬರಗೂರು, ಹೊನ್ನಾಳಿ, ರಾಯಲ್ಪಾಡು, ಆಗುಂಬೆ, ಹಾಸನ, ಚನ್ನಗಿರಿ, ದೊಡ್ಡಬಳ್ಳಾಪುರ, ಮಧುಗಿರಿಯಲ್ಲಿ ಮಳೆಯಾಗಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದ್ದು, ಆಗಸ್ಟ್ 22 ರಿಂದ ಆಗಸ್ಟ್ 30 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಆಗಸ್ಟ್ 24 ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications