Karnataka Rain Alert: ಕರ್ನಾಟಕದಲ್ಲಿ ಹಲವೆಡೆ ತೀವ್ರ ಗಾಳಿ ಸಹಿತ ಧಾರಾಕಾರ ಮಳೆ: ಎಲ್ಲಿ? ಯಾವಾಗ?
ಕರ್ನಾಟಕದಲ್ಲಿ ಹಲವೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮುಂದಿನ ಆರು ದಿನಗಳವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಇಂದು ಗುಡುಗು ಮಿಂಚು ತೀವ್ರ ಗಾಳಿ ಸಮೇತ ವರುಣ ಧರೆಗಿಳಿಯಲಿದ್ದಾನೆಂದು ಐಎಂಡಿ ಸೂಚನೆ ನೀಡಿದೆ.
ಹೌದು... ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಗಂಟೆಗೆ 50km ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಮನೆಯಿಂದ ಹೊರ ಬರುವ ಮುನ್ನ ಎಚ್ಚರಿಕೆಯಿಂದಿರುವಂತೆ ಐಎಂಡಿ ಸೂಚನೆ ನೀಡಿದೆ. ಇದರಿಂದಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಂಡ್ಯ, ಮೈಸೂರು, ಕೋಲಾರ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ವಿಜಯನಗರ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಲು, ದಾವಣಗೆರೆ, ಹಾಸನ, ಚಿತ್ರದುರ್ಗ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ರಾಯಚೂರು, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಲ್ಲಿ ಧಾರಾಕಾರ ಮಳೆಯಾಗಲಿದೆ.
ಇಂದು ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದ್ದು ಇನ್ನೂ ಹಲವೆಡೆ ತಾಪಮಾನ ಹೆಚ್ಚಾಗಲಿದೆ. ಕಳೆದ ದಿನ ಚಿತ್ರದುರ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆಯಾಗಿದ್ದು ಕೊಂಚ ಬಿಸಿಲಿನಿಂದ ನೆಮ್ಮದಿ ಸಿಕ್ಕಿದೆ. ಇಂದು ಕೂಡ ಬೆಂಗಳೂರು ಸೇರಿಂದತೆ ಹಲವೆಡೆ ಮಳೆಯೊಂದಿಗೆ ದಿನ ಆರಂಭವಾಗಿದೆ.

ಗಾಳಿ ತೀವ್ರ ವೇಗ ಪಡೆದುಕೊಳ್ಳುವ ಸಾಧ್ಯತೆ ಇದ್ದು, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ. ಕೋಲಾರ, ಬೆಂಗಳೂರು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಹೊನಕೆರೆ, ಮಿಡಿಗೇಶಿ, ಕೃಷ್ಣರಾಜಸಾಗರ, ಚಾಮರಾಜನಗರ, ಕೊಳ್ಳೇಗಾಲ, ಭಾಗಮಂಡಲ, ದೇವನಹಳ್ಳಿ, ಮಂಡ್ಯದಲ್ಲಿ ಧಾರಾಕಾರ ಮಳೆಯಾಗಲಿದೆ.
ಪಣಂಬೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 27.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 41.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 43.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 44.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 30.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications