Karnataka Rain Alert: ಮುಂದಿನ ಎರಡೂ ದಿನ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುತ್ತಿದ್ದು, ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೇ 10 ಹಾಗೂ 11ರಿಂದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಮುಂದಿನ ಏಳು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದೆ. ಇನ್ನು ಕರಾವಳಿ ಕರ್ನಾಟಕದಲ್ಲಿ ಒಣ ಹವೆ ಇತ್ತು. ಬೈಲಹೊಂಗಲ (ಬೆಳಗಾವಿ ಜಿಲ್ಲೆ), ಕೊಟ್ಟಿಗೆಹಾರ (ಚಿಕ್ಕಮಗಳೂರು) 2, ಗದಗದ ಶಿರಹಟ್ಟಿ, ಭಾಗಮಂಡಲ (ಕೊಡಗು ಜಿಲ್ಲೆ) ಮುರಗೋಡ (ಬೆಳಗಾವಿ ಜಿಲ್ಲೆ) ಈ ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Heavy Rain With Thunderstorms Likely In Karnataka Till May 14 IMD Alert

ದಕ್ಷಿಣ ತೆಲಂಗಾಣದಿಂದ ರಾಯಲಸೀಮಾ ಮತ್ತು ತಮಿಳುನಾಡಿನಾದ್ಯಂತ ಮನ್ನಾರ್ ಕೊಲ್ಲಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಉತ್ತರ-ದಕ್ಷಿಣ ತಗ್ಗು ಮುಂದುವರಿದಿದೆ. ಕಲಬುರಗಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು 39.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿಲ್ಲ. ಕರಾವಳಿ ಕರ್ನಾಟಕದ ಕಾರವಾರ ಮತ್ತು ಪಣಂಬೂರು ಮತ್ತು ದಕ್ಷಿಣ ಒಳನಾಡಿನ ಬೆಂಗಳೂರಿನ ಮೇಲೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಉತ್ತರ ಒಳನಾಡಿನ ಬಾಗಲಕೋಟೆ, ಕೊಪ್ಪಳ, ರಾಯಚೂರಿನಲ್ಲಿ ಸಾಮಾನ್ಯ ಮಟ್ಟಕ್ಕಿಂತ ಕಡಿಮೆ ಇತ್ತು. ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನ ಕಂಡುಬಂದಿದೆ.

Heavy Rain With Thunderstorms Likely In Karnataka Till May 14 IMD Alert

ಮೇ 9ರಂದು ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಬಾಗಲಕೋಟೆ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ರಾಮನಗರ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಚಾಮರಾಜನಗರದಲ್ಲಿ ಒಣ ಹವಾಮಾನ ಮುಂದುವರಿಯಲಿದೆ.

ಬೆಂಗಳೂರು ಭಾಗದಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಬಿರುಗಾಳಿಯೊಂದಿಗೆ ಹಗುರ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ ಸುಮಾರು 33 ಡಿಗ್ರಿ ಸೆಲ್ಸಿಯಸ್‌ನಿಂದ 22 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+