Heavy Rain: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕ, ಜುಲೈ, 19: ಮುಂಗಾರು ಆರಂಭವಾಗಿ ಒಂದು ತಿಂಗಳು ಕಳೆಯುತ್ತಾ ಬಂದರೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದಾಂತಾಗಿದೆ. ಮತ್ತೊಂದೆಡೆ ನೋಡುವುದಾದರೆ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಮಳೆರಾಯ ಬಿಡುವಿಲ್ಲದೆ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ಇಂದು ಕೂಡ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಬುಧವಾರ (ಜುಲೈ 19) ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದ್ದು, ಈ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಬೆಂಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ಕಲಬುರಗಿ ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆ ಬೀಳುವ ಸಾಧ್ಯತೆಯಿದ್ದು, ಈ ಭಾಗಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.












Click it and Unblock the Notifications