Heavy Rain Alert: ಈ ಜಿಲ್ಲೆಗಳಲ್ಲಿ ವಾರವಿಡೀ ಅಬ್ಬರಿಸಲಿದೆ ಗುಡುಗು ಸಹಿತ ಮಳೆ, ಎಲ್ಲೆಲ್ಲಿ ಅಲರ್ಟ್?
ರಾಜ್ಯದಲ್ಲಿ ಬಿರು ಬೇಸಿಗೆಯಲ್ಲೂ ಮಳೆ ಪ್ರಮಾಣ ಹೆಚ್ಚಾಗಿದ್ದು, ಮೇ 5ರಿಂದ ಒಂದು ವಾರದವರೆಗೆ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ, ವೇಗವಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಮಳೆ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಸೋಮವಾರದಿಂದ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದೆ.
ಉತ್ತರ-ದಕ್ಷಿಣ ವಾಯುಭಾರ ಕುಸಿತವು ಈಗ ದಕ್ಷಿಣ ಉತ್ತರ ಪ್ರದೇಶದ ಮಧ್ಯ ಭಾಗಗಳಲ್ಲಿ ಚಂಡಮಾರುತದ ಪರಿಚಲನೆಯಿಂದ ಮಧ್ಯಪ್ರದೇಶದಾದ್ಯಂತ ದಕ್ಷಿಣ ತಮಿಳುನಾಡಿನವರೆಗೆ, ಕರ್ನಾಟಕದ ಮರಾಠವಾಡ ಒಳನಾಡಿನ ಉತ್ತರ ಭಾಗಗಳಲ್ಲಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದೆ ಎಂದು ಮಾಹಿತಿ ನೀಡಿದೆ.

ಈ ಹಿನ್ನೆಲೆ ರಾಜ್ಯದಲ್ಲಿ ಸೋಮವಾರದಂದು (ಮೇ 5) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರ ಜೊತೆಗೆ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.
ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ), ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಬಳ್ಳಾರಿ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಚಾಮರಾಜನಗರ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಮೇ 10ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಈ ವಾರ ಮಳೆಯಾಗುವ ಸಾಧ್ಯತೆ ಹೆಚ್ಚು.
ಎಲ್ಲೆಲ್ಲಿ ಅಲರ್ಟ್?
ಸೋಮವಾರ ರಾಜ್ಯದ 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ 26 ಜಿಲ್ಲೆಗಳಿಗಲ್ಲಿ ಅಲರ್ಟ್ ಮುಂದುವರಿಯಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆ ಬಿಟ್ಟು ಉಳಿದೆಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಮುಂದಿನ 5 ದಿನಗಳವರೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ. ಬೆಂಗಳೂರು ನಗರ ಮತ್ತು ನೆರೆಹೊರೆಯ ಪ್ರದೇಶಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀನೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 35 ಡಿಗ್ರಿ ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.












Click it and Unblock the Notifications