Karnataka Rain: ಐದು ದಿನ ಭಾರಿ ಮಳೆ; ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಟ್ಟ ಹವಾಮಾನ ಇಲಾಖೆ
ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸು ಪಡೆಯುವ ಮುನ್ಸೂಚನೆ ಸಿಕ್ಕಿದೆ. ಮುಂದಿನ ಐದು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮುನ್ಸೂಚನೆ ಪ್ರಕಾರ, ಮುಂದಿನ ಐದು ದಿನ ವ್ಯಾಪಕ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂದಿನ ಐದು ದಿನ ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಗದಗ, ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಕೂಡ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.
#Flood Situation Report cum Advisories as of 07.06.24.
— Karnataka State Natural Disaster Monitoring Centre (@KarnatakaSNDMC) June 7, 2024
Water level is expected to rise in rivers of north Karnataka
Source: Central Water Commission pic.twitter.com/UgXJJHYgY8
ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಭಾರಿ ಮಳೆ
ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಮುಂದಿನ ಐದು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೃಷ್ಣಾ ಜಲಾನಯನ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಲಿದ್ದು ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.












Click it and Unblock the Notifications