ರಾಜ್ಯದಲ್ಲಿ ಜುಲೈ1ರವರೆಗೂ ಮಳೆ; ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು,
ಜೂನ್ 28: ರಾಜ್ಯದಲ್ಲಿ ಕೆಲವು ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಎರಡು ದಿನಗಳಿಂದ ಮತ್ತೆ ಚುರುಕಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಸೋಮವಾರದಿಂದ ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. id="toptextpromo"> id='are-slot-1' class='oiad oi-axt oiadv'>ಕರಾವಳಿ
ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಜೂನ್ 28ರಿಂದ ಜುಲೈ 1ರವರೆಗೆ ಹೆಚ್ಚಿನ ಮಳೆಯಾಗುವುದಾಗಿ ತಿಳಿಸಿದೆ. ಕರಾವಳಿ ಜಿಲ್ಲೆಗಳಿಗೆ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದೆ ಓದಿ... id='are-slot-2' class='oiad oi-axt oiadv'>
ಉತ್ತರ ಒಳನಾಡಿನಲ್ಲಿ ಮಳೆ ಆರ್ಭಟ
ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ ರಾಯಚೂರು ಜಿಲ್ಲೆಯ ಮಸ್ಕಿ ಹಾಗೂ ಮುದಗಲ್, ಕೊಪ್ಪಳದ ತಾವರಗೇರಾದಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ. ಮಸ್ಕಿ 14 ಎಂಎಂ, ಮುದಗಲ್ ಹಾಗೂ ತಾವರಗೇರಾದಲ್ಲಿ 7 ಎಂಎಂ ಮಳೆ ದಾಖಲಾಗಿದೆ. ಗಡಿ ಜಿಲ್ಲೆ ಬೀದರ್‌ನಲ್ಲಿಯೂ ಮಳೆ ಅಬ್ಬರ ಹೆಚ್ಚಿದ್ದು, ಹುಮ್ನಾಬಾದ್, ಚಿಟಗುಪ್ಪ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಸೋಮವಾರ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವುದಾಗಿ ತಿಳಿಸಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಜುಲೈ 1ರವರೆಗೂ ಕರಾವಳಿ ಸೇರಿದಂತೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವುದಾಗಿ ತಿಳಿಸಿದೆ. ಆಗುಂಬೆ ಬೆಟ್ಟದಲ್ಲಿ ಮುಂಜಾಗ್ರತಾ ಕ್ರಮವಾಗಿ ಘನವಾಹನಗಳ ಸಂಚಾರಕ್ಕೆ ತಡೆ ಒಡ್ಡಲಾಗಿದೆ.

ಉತ್ತರ ಕರ್ನಾಟಕದಲ್ಲಿ ಮಳೆ
ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಹೈದರಾಬಾದ್- ಕರ್ನಾಟಕ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿರುವುದಾಗಿ ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಜುಲೈ 1ರವರೆಗೆ ಮಳೆ ಮುಂದುವರೆಯುವ ಸೂಚನೆ ನೀಡಿದ್ದಾರೆ.
Recommended Video

ಬೆಂಗಳೂರು ನಗರದಲ್ಲಿ ಮಳೆ
ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ದಿನವಿಡೀ ಮೋಡ ಕವಿದ ವಾತಾವರಣವಿರುವುದಾಗಿ ತಿಳಿಸಿದೆ.












Click it and Unblock the Notifications