ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಜುಲೈ1ರವರೆಗೂ ಮಳೆ; ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

|
Google Oneindia Kannada News

ಬೆಂಗಳೂರು, ಜೂನ್ 28: ರಾಜ್ಯದಲ್ಲಿ ಕೆಲವು ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಎರಡು ದಿನಗಳಿಂದ ಮತ್ತೆ ಚುರುಕಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಸೋಮವಾರದಿಂದ ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಜೂನ್ 28ರಿಂದ ಜುಲೈ 1ರವರೆಗೆ ಹೆಚ್ಚಿನ ಮಳೆಯಾಗುವುದಾಗಿ ತಿಳಿಸಿದೆ. ಕರಾವಳಿ ಜಿಲ್ಲೆಗಳಿಗೆ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದೆ ಓದಿ...

 ಉತ್ತರ ಒಳನಾಡಿನಲ್ಲಿ ಮಳೆ ಆರ್ಭಟ

ಉತ್ತರ ಒಳನಾಡಿನಲ್ಲಿ ಮಳೆ ಆರ್ಭಟ

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ ರಾಯಚೂರು ಜಿಲ್ಲೆಯ ಮಸ್ಕಿ ಹಾಗೂ ಮುದಗಲ್, ಕೊಪ್ಪಳದ ತಾವರಗೇರಾದಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ. ಮಸ್ಕಿ 14 ಎಂಎಂ, ಮುದಗಲ್ ಹಾಗೂ ತಾವರಗೇರಾದಲ್ಲಿ 7 ಎಂಎಂ ಮಳೆ ದಾಖಲಾಗಿದೆ. ಗಡಿ ಜಿಲ್ಲೆ ಬೀದರ್‌ನಲ್ಲಿಯೂ ಮಳೆ ಅಬ್ಬರ ಹೆಚ್ಚಿದ್ದು, ಹುಮ್ನಾಬಾದ್, ಚಿಟಗುಪ್ಪ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದೆ.

ಕರ್ನಾಟಕ ಕರಾವಳಿಯಲ್ಲಿ ಜೂನ್ 28ರಿಂದ ಭಾರೀ ಮಳೆ ಮುನ್ಸೂಚನೆಕರ್ನಾಟಕ ಕರಾವಳಿಯಲ್ಲಿ ಜೂನ್ 28ರಿಂದ ಭಾರೀ ಮಳೆ ಮುನ್ಸೂಚನೆ

 ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಸೋಮವಾರ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವುದಾಗಿ ತಿಳಿಸಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಜುಲೈ 1ರವರೆಗೂ ಕರಾವಳಿ ಸೇರಿದಂತೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವುದಾಗಿ ತಿಳಿಸಿದೆ. ಆಗುಂಬೆ ಬೆಟ್ಟದಲ್ಲಿ ಮುಂಜಾಗ್ರತಾ ಕ್ರಮವಾಗಿ ಘನವಾಹನಗಳ ಸಂಚಾರಕ್ಕೆ ತಡೆ ಒಡ್ಡಲಾಗಿದೆ.

 ಉತ್ತರ ಕರ್ನಾಟಕದಲ್ಲಿ ಮಳೆ

ಉತ್ತರ ಕರ್ನಾಟಕದಲ್ಲಿ ಮಳೆ

ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಹೈದರಾಬಾದ್- ಕರ್ನಾಟಕ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿರುವುದಾಗಿ ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಜುಲೈ 1ರವರೆಗೆ ಮಳೆ ಮುಂದುವರೆಯುವ ಸೂಚನೆ ನೀಡಿದ್ದಾರೆ.

Recommended Video

Schools Reopen | SSLC ವಿದ್ಯಾರ್ಥಿಗಳ ನೆರವಿಗೆ ಬರ್ತಾರಾ ಶಿಕ್ಷಣ ಸಚಿವರು | Oneindia Kannada
 ಬೆಂಗಳೂರು ನಗರದಲ್ಲಿ ಮಳೆ

ಬೆಂಗಳೂರು ನಗರದಲ್ಲಿ ಮಳೆ

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ದಿನವಿಡೀ ಮೋಡ ಕವಿದ ವಾತಾವರಣವಿರುವುದಾಗಿ ತಿಳಿಸಿದೆ.

English summary
IMD predicts Heavy rainfall over Coastal Karnataka from june 28 till july 1
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X