ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಸಂಭವ
Recommended Video

ಬೆಂಗಳೂರು, ಅಕ್ಟೋಬರ್ 4: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕೇರಳ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕರ್ನಾಟಕದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಅ.5ರಿಂದ ಒಂದೆರೆಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ ಕರಾವಳಿಯ ಬಹುತೇಕ ಭಾಗ, ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅ.8ರಂದು ಚಾಮರಾಜನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಈಗಾಗಲೇ ಕರಾವಣಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆ ಆರಂಭವಾಗಿದೆ. ಮುಂದಿನ ಒಂದು ವಾರ ಮಳೆ ಮುಂದುವರಿಕೆ ಮುನ್ಸೂಚನೆ ಇದೆ. ಕರಾವಳಿಯಲ್ಲದೆ ಮಲೆನಾಡು ಜಿಲ್ಲೆಗಳು, ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲೂ ಮಳೆ ಚುರುಕಾಗಲಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕೇರಳ, ಲಕ್ಷದ್ವೀಪ, ತಮಿಳುನಾಡು, ಪುದುಚೆರಿಯಲ್ಲಿ ಭಾನುವಾರದವರೆಗೂ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.












Click it and Unblock the Notifications