ಮಳೆಯಿಂದ ಶೀತಗಾಳಿ ಅಬ್ಬರ, ವೈರಸ್ ಹೆಚ್ಚಳದ ಭೀತಿ
ಬೆಂಗಳೂರು, ಜುಲೈ 18: ರಾಜ್ಯದಾದ್ಯಂತ ಕಳೆದ ಒಂದು ತಿಂಗಳಿನಿಂದ ಮುಂಗಾರು ಮಳೆ ಹೆಚ್ಚಾಗಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಕೂಡ ಏರಿಕೆಯಾಗಿದೆ.
Recommended Video
ರಾಜ್ಯಾದ್ಯಂತ ಸರಾಸರಿ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ. ಇದರಿಂದಾಗಿ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ.
ಪ್ರಸ್ತುತ ಬೆಂಗಳೂರು ನಗರದಲ್ಲಿ 20 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಠ ಉಷ್ಣಾಂಶವಿದೆ. ಮುಂದಿನ ದಿನಗಳಲ್ಲಿ 15 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ, ಹೀಗಾಗಿ ಸಾರ್ವಜನಿಕರು ಈ ಬಗ್ಗೆ ಎಚ್ಚರವಹಿಸಬೇಕು ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಾತಾವರಣದಲ್ಲಿ ವೈರಸ್ ಹೆಚ್ಚಳ
ಈ ವಾತಾವರಣದಲ್ಲಿ ಕೊರೊನಾ ಸೇರಿದಂತೆ ಇತರೆ ವೈರಸ್‌ಗಳು ಬಲಿಷ್ಠಗೊಳ್ಳಲಿದ್ದು,ಎಚ್ಚರಿಕೆ ವಹಿಸುವುದು ಅಗತ್ಯ ಎಂದು ತಜ್ಞರು ಹೇಳಿದ್ದಾರೆ. ರಾಜ್ಯದ ಕರಾವಳಿ ಮಲೆನಾಡು ಹಾಗೂ ದಕ್ಷಿಣ ಕನ್ನಡ ಮತ್ತು ಉತ್ತರ ಒಳನಾಡಿನಲ್ಲಿ ಕಳೆದ ತಿಂಗಳಿನಿಂದ ಭಾರಿ ಮಳೆಯಾಗುತ್ತಿದೆ.

ಉಷ್ಣಾಂಶ ಕಡಿಮೆಯಾಗಿ ತಂಪು ವಾತಾವರಣ
ರಾಜ್ಯದ ವಿವಿಧೆಡೆ ಮಳೆಯಾಗುತ್ತಿರುವುದರಿಂದ ತಂಪು ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ, ಮುಂದಿನ ಒಂದು ತಿಂಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಇದರಿಂದ ಉಷ್ಣಾಂಶ ಮತ್ತಷ್ಟು ಕಡಿಮೆಯಾಗಲಿದ್ದು, ಚಳಿ ಹೆಚ್ಚಲಿದೆ ಎಂದು ರಾಜ್ಯ ಸೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
ಪ್ರಸ್ತುತ ರಾಜ್ಯದಲ್ಲಿ ಸರಾಸರಿ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ನಿಂದ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಕಳೆದ ಹತ್ತು ವರ್ಷಗಳಿಗೆ ಹೋಲಿಕೆ ಮಾಡಿದಲ್ಲಿ ಜುಲೈ ತಿಂಗಳ ಉಷ್ಣಾಂಶ ಕಡಿಮೆ ಮಟ್ಟಕ್ಕೆ ಹೋಗಿಲ್ಲ. ಇದು ಸಾಮಾನ್ಯ ಪ್ರಮಾಣದ್ದಾಗಿದೆ. ಚಳಿಗಾಲ ಪ್ರಾರಂಭವಾಗುತ್ತಿದ್ದಂತೆ ಸರಾಸರಿ 15 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ.

ಎಚ್ಚರವಹಿಸುವುದು ಅಗತ್ಯ
ವಾತಾವರಣದಲ್ಲಿ ಶೀತಗಾಳಿ ಹೆಚ್ಚಾಗುತ್ತಿರುವುದರಿಂದ ಕೊರೊನಾ ಸೇರಿದಂತೆ ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿರುವವರು ಮತ್ತಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಶೀತವಾತಾವರಣದಲ್ಲಿ ಕೊರೊನಾ ಸೇರಿದಂತೆ ಇತರೆ ವೈರಸ್‌ಗಳು ಬಲಿಷ್ಠಗೊಳ್ಳಲಿವೆ.ಇದರಿಂದ ವೈರಸ್ ಸೋಂಕಿತರ ಆರೋಗ್ಯದ ಹೆಚ್ಚು ಪ್ರಭಾವ ಬೀರಿ ಜೀವಕ್ಕೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ.












Click it and Unblock the Notifications