ಕಾವೇರಿ, ಕೃಷ್ಣ ಜಲಾನಯನ ಪ್ರದೇಶದಲ್ಲಿ ಮುಂದಿನ 8 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

Kaveri River: ರಾಜ್ಯದಲ್ಲೆಡೆ ಜೂನ್‌ ಆರಂಭದಿಂದ ಮುಂಗಾರು ಚುರುಕು ಪಡೆದಿತ್ತು. ಆದರೆ ಕೆಲವು ಜಿಲ್ಲೆಗಳಲ್ಲಿ ಮೂರನೇ ವಾರ ಮಳೆರಾಯನ ಆರ್ಭಟ ತಗ್ಗಿದೆ. ಇದೀಗ ಕೆಲವು ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆ ಮುಂದುವರೆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಮತ್ತೊಂದೆಡೆ ಹಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಇದರ ನಡುವೆಯೇ ಕಾವೇರಿ, ಕೃಷ್ಣ ಜಲಾನಯನ ಪ್ರದೇಶದಲ್ಲಿ ಮುಂದಿನ 8 ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಮುಂಗಾರು ಪಡೆದು ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಜಲಾಶಯದ ನೀರಿನ ಮಟ್ಟವು ಕೂಡ ಹೆಚ್ಚಾಗುತ್ತಲೇ ಇತ್ತು. ಆದರೆ ಇದೀಗ ದಿಢೀರ್‌ ಮಳೆ ತಗ್ಗಿದ ಹಿನ್ನೆಲೆ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ 8 ದಿನಗಳ ಕಾಲ ಈ ಭಾಗದಲ್ಲಿ ಮಳೆ ಮುಂದುವರೆದರೆ, ಮತ್ತೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿ, ನೀರಿನ ಮಟ್ಟ ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

Heavy rainfall forecast for next 8 days in Kaveri and Krishna basin

ಜುಲೈ 01 ರಿಂದ ಜುಲೈ 09 ರವರೆಗೆ ಕೃಷ್ಣಾ ಜಲಾನಯನ ಪ್ರದೇಶ, ಕಾವೇರಿ ಜಲಾಜನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಈ ಭಾಗದ ಕೆಲವೆಡೆ ಮಾತ್ರ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.

ಕಳೆದ ವರ್ಷ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ ಸಂಪೂರ್ಣ ಪ್ರಮಾಣದಲ್ಲಿ ನೆಲಕಚ್ಚಿದ್ದು, ಇದರಿಂದ ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜನರು ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ಉಂಟಾಗಿತ್ತು. ಇದರ ನಡುವೆಯೇ ಕಾವೇರಿ ವಿವಾದವೂ ಕೂಡ ಸೃಷ್ಟಿಯಾಯಿತು. ಆದರೆ ಇದೀಗ ಈ ವರ್ಷ ಅಂದರೆ 2024 ಜೂನ್‌ ಆರಂಭದಲ್ಲೇ ಮುಂಗಾರು ಚುರುಕು ಪಡೆದ ಹಿನ್ನೆಲೆ ಜಲಾಶಯಕ್ಕೆ ಜೀವಕಳೆ ಬಂದಂತಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಕೆಆರ್‌ಎಸ್‌ ಜಲಾಶಯದ ನೀರಿನ ಪ್ರಮಾಣವ ಹೆಚ್ಚಾಗಿದ್ದು, ಇದರಿಂದ ಬಾಡಿಹೋಗಿದ್ದ ಅನ್ನದಾತರ ಮುಖದಲ್ಲಿ ಮತ್ತೆ ಮಂದಹಾಸ ಮೂಡುವಂತಾಯಿತು. ಇದೀಗ ಜುಲೈ ಆರಂಭವಾಗುತ್ತಿದ್ದಂತೆ ಮಳೆ ತಗ್ಗಿದ್ದು, ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ. ಮತ್ತೊಂದೆಡೆ ಮುಂದಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಭಾರೀ ಮಳೆಯಾದರೆ ಮತ್ತೆ ಒಳಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+