Rain Alert: ಭಾರೀ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತ, ಡ್ಯಾಂನಿಂದ ಹೆಚ್ಚುವರಿ ನೀರು ಹೊರಕ್ಕೆ, ಪ್ರವಾಹ

Weather Today: ಕರ್ನಾಟಕದಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಮಲೆನಾಡಿನ ಭಾಗಗಳಲ್ಲಿ ಮಳೆಗೆ ಉಂಟಾದ ಸಮಸ್ಯೆ ಹೇಳತೀರದಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಕೊಡಗು ಜಿಲ್ಲೆಯ ಭಾಗಮಂಗಲ ಸಂಪೂರ್ಣ ಪ್ರವಾಹ ಸ್ಥಿತಿ ಉಂಟಾಗಿದೆ. ತ್ರಿವೇಣಿ ಸಂಗಮ ಮುಳುಗಡೆ ಆಗಿದೆ. ನಿರಂತರ ಮಳೆ ಬರುತ್ತಿರುವ ಕಾರಣ ಇಲ್ಲಿ ಮಳೆ ನಿಂತಿಲ್ಲ. ಹೀಗಾಗಿ ದೇವಸ್ಥಾನ, ರಸ್ತೆಗಳಲ್ಲಿ ನೀರು ತುಂಬಿಕೊಂಡಿದೆ. ನದಿಗಳು ಉಕ್ಕಿ ಹರಿಯುತ್ತೇವೆ.

ಮಲೆನಾಡಿನಲ್ಲಿ ಈ ಭಾರಿ ಅವಧಿಗೂ ಮುನ್ನವೇ ಹೆಚ್ಚಿನ ಮಳೆ ಆಗಿದೆ. ಮೇ ತಿಂಗಳ ಅಂತ್ಯಕ್ಕೆ ಬರುತ್ತಿದ್ದಂತೆ ಉತ್ತಮ ಆಗಿದ್ದು, ಅದು ಜೂನ್ ತಿಂಗಳವರೆಗೂ ಮುಂದುವರಿಯಿತು. ಮುಂಗಾರು ಮಳೆ ಆರಂಭದಿಂದಲೂ ಈವರೆಗೆ ವ್ಯಾಪಕ ಮಳೆ ಸುರಿಯುತ್ತಿದೆ. ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಿಗೆ 'ರೆಡ್ ಅಟರ್ಲ್' ನೀಡಲಾಗಿದೆ. ಕೊಡಗಿನಲ್ಲಿ ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ನದಿಗಳು ಉಕ್ಕಿ ಹರಿಯುತ್ತಿವೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Heavy Rainfall from One week Bhagamandala Triveni Sangam Flooded at Kodagu Weather forecast

ಜನಜೀವನ ಅಸ್ತವ್ಯಸ್ತ: ಪ್ರವಾಹ ಎಚ್ಚರಿಕೆ

ಹಾರಂಗಿ ಡ್ಯಾಂನಿಂದ ಸುಮಾರು 1800 ಕ್ಯೂಸೆಕ್ ನೀರು ನದಿಗೆ ಬೀಡಲಾಗಿದೆ. ಕಳೆದೊಂದು ವಾರದಿಂದ ಪ್ರತಿ ನಿತ್ಯವು ಒಳಹರಿವು ಹೆಚ್ಚಾಗುತ್ತಿದೆ. ಅಗತ್ಯತೆ ನೋಡಿಕೊಂಡು ನೀರು ಬಿಡುಗಡೆ ಆಗುತ್ತಿದ್ದು, ಕಬಿನಿ ಜಲಾಶಯದ ಕೆಳ ಭಾಗದಲ್ಲಿರುವ ಜನರಿಗೆ ಪ್ರವಾಸ ಎಚ್ಚರಿಕೆ ನೀಡಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮಾಹಿತಿ ನೀಡಲಾಗಿದೆ.

ತ್ರಿವೇಣಿ ಸಂಗಮದ ಉದ್ಯಾನ ಸಂಪೂರ್ಣ ನೀರಲ್ಲಿ ಮುಳುಗಿ ಹೋಗಿದೆ. ಭಗಂಡೇಶ್ವರ ದೇವಸ್ಥಾನದ ಆವರಣಕ್ಕೂ ನೀರು ನುಗ್ಗಿದ್ದು, ಅಂಗಡಿ ಮುಂಗಟ್ಟು ಮುಚ್ಚಿ ಅಲ್ಲಿಂದ ಹೋಗುವಂತೆ ತಿಳಿಸಿದ್ದಾರೆ. ನಾಪೋಕ್ಲು, ಅಯ್ಯಂಗೇರಿ, ತ್ರಿವೇಣಿ ಸಂಗಮ, ಭಾಗಮಂಡಲ ಸುತ್ತಮುತ್ತಲಿನ ರಸ್ತೆಗಳಲ್ಲಿ ಮಳೆ ನೀರು ಹರಿಯುತ್ತಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಕೆಲವು ದಿನಗಳ ಕಾಲ ಹೆಚ್ಚಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಬಿನಿಯಿಂದ ಹೆಚ್ಚುವರಿ ನೀರು ಬಿಡುಗಡೆ

ಕೊಡಗಿನ ತಲಾವೇರಿಯಲ್ಲಿ 110 ಮಿಲಿ ಮೀಟರ್ ಮಳೆ ದಾಖಲಾಗಿದೆ. ಭಾಗಮಂಡಲದಲ್ಲಿ 91 ಮಿಲಿ ಮೀಟರ್ ಮಳೆ ಆಗಿದೆ. ಇಂದು ಕಬಿನಿ ಜಲಾಶಯದಲ್ಲಿ ಮತ್ತೆ 2000 ಕ್ಯೂಸೆಕ್ ಹೆಚ್ಚುವರಿ ನೀರು ಬಿಡುಗಡೆಗೆ ನಿರ್ಧರಿಸಲಾಗಿದೆ. ಕೊಡಗು, ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ ಸೇರಿದಂತೆ ಜಿಲ್ಲೆ ವ್ಯಾಪ್ತಿಯಲ್ಲಿ ಜೋರು ಮಳೆ ಮುಂದುವರಿಯಲಿದೆ. ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಕೈಗೊಂಡಿದೆ.

ಮುಂದಿನ ಮೂರು ದಿನ ಕರ್ನಾಟಕ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲೂ ವ್ಯಾಪಕ ಮಳೆ ಆಗಲಿದೆ. ಒಳನಾಡು ಜಿಲ್ಲೆಗಳ ಕೆಲವೆಡೆ ಹಗುರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+