Rain News: ಶಿವಮೊಗ್ಗ & ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರಿ ಮಳೆ

ಬಿರು ಬಿಸಿಲಿನ ನಡುವೆಯೂ ರಾಜ್ಯದ ಹಲವು ಕಡೆಗಳಲ್ಲಿ ಮಳೆರಾಯ ಆಗಾಗ್ಗೆ ದರ್ಶನ ನೀಡುತ್ತಿದ್ದಾನೆ. ಮಂಗಳವಾರ ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿತ್ತು, ಬುಧವಾರ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆರಾಯ ದರ್ಶನ ನೀಡಿದ್ದಾನೆ.

ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದೆ. ಬಾಳೆಹೊನ್ನೂರು ಸಮೀಪದ ಶಿರಗೋಳ ಗ್ರಾಮದಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಸುರಿದಿದೆ. ಶಿರಗೋಳ ಮಾತ್ರವಲ್ಲದೆ ಬಾಳೆ ಹೊನ್ನೂರು ಸಮೀಪದ ಹಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ.

Heavy Rainfall Hits Chikkamagaluru and Several Districts in Karnataka on April 3

ಚಿಕ್ಕಮಗಳೂರು, ಭದ್ರವಾತಿ, ಬ್ರಹ್ಮಸಾಗರದ ಹಲವು ಕಡೆಗಳಲ್ಲಿ ಮಳೆಯಾಗಿದೆ. ದಟ್ಟವಾದ ಮೋಡಗಳು ಆವರಿಸಿಕೊಂಡಿದ್ದು, ಬುಧವಾರ ರಾತ್ರಿ ವೇಳೆಗೆ ನಗರದ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ

ಚಿಕ್ಕಮಗಳೂರಿ ಜಿಲ್ಲೆಯ ಬೇಲೂರು, ಕಡೂರು, ತರೀಕೆರೆ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾದರೆ. ಹೊಸದುರ್ಗ, ಹೊಳಲ್ಕೆರೆ ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ದರ್ಶನ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ವರ್ಷ ಮಳೆಯಾಗದ ಕಾರಣ ಕಾಫಿ ಬೆಳೆಗಾರರು ಬೇಸಿಗೆಯಲ್ಲಿ ತೋಟಗಳನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ.

ಮಳೆಗಾಗಿ ಜಿಲ್ಲೆಯ ಜನ ದೇವರ ಪ್ರಾರ್ಥನೆ ಕೂಡ ಮಾಡಿದ್ದರು. ಪ್ರಾರ್ಥನೆಯ ಫಲವೋ, ಪ್ರಕೃತಿಯ ವರವೋ ಜಿಲ್ಲೆಯ ಹಲವು ಕಡೆ ಮಳೆಯಾಗುತ್ತಿದೆ. ಇದೇ ರೀತಿ ಜಿಲ್ಲೆಯಾದ್ಯಂತ ಹದ ಮಳೆಯಾದರೆ ಸಾಕಪ್ಪ ಎಂದು ರೈತರು ಪ್ರಾರ್ಥನೆ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಉತ್ತಮ ಮುಂಗಾರು ನಿರೀಕ್ಷೆ

ಇನ್ನು ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿದ್ದು, ಬಿಸಿಲಿನ ಹೊಡೆತಕ್ಕೆ ಜನ ಕಂಗಾಲಾಗಿದ್ದಾರೆ. ರಾಜ್ಯದ ಜಲಾಶಯಗಳು ನೀರಿಲ್ಲದೆ ಬಣಗುಡುತ್ತಿದ್ದು ಸದ್ಯ ಮಳೆಯಾದರೆ ಸಾಕು ಎನ್ನುವಂತಾಗಿದೆ.

ಆದರೆ ಹವಾಮಾನ ಇಲಾಖೆ ಈ ಬಾರಿ ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗುವ ಮುನ್ಸೂಚನೆ ನೀಡಿದೆ. ಅದಕ್ಕೂ ಮುನ್ನ ಜನ ಈ ಬಿಸಿಲಿನ ಬಾಧೆಯನ್ನು ತಾಳಿಕೊಳ್ಳಬೇಕಿದೆ. ಏಪ್ರಿಲ್ ಕೊನೆಯ ವಾರದಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ ಎರಡನೇ ವಾರವೇ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದರೂ, ಈಗ ಮತ್ತಷ್ಟು ದಿನ ಮಳೆಗಾಗಿ ಕಾಯಬೇಕಾಗುತ್ತದೆ. ರಾಜ್ಯದಲ್ಲಿ ಜೂನ್ ವೇಳೆಗೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+