ವಾಯುಭಾರ ಕುಸಿತ: ಕರ್ನಾಟಕದಾದ್ಯಂತ 48 ಗಂಟೆಗಳಲ್ಲಿ ಭಾರಿ ಮಳೆ

ಬೆಂಗಳೂರು, ಅಕ್ಟೋಬರ್ 19: ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದಾದ್ಯಂತ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ 115 ರಿಂದ 205 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ.

ಹಿಂಗಾರು ಆರಂಭ

ಹಿಂಗಾರು ಆರಂಭ

ಹಿಂಗಾರು ಮಳೆ ಆರಂಭವಾಗಿರುವ ಬಗ್ಗೆ ಹವಾಮಾನ ಇಲಾಖೆ ಅಧಿಕೃತವಾಗಿ ಮಾಹಿತಿ ನೀಡಿದ್ದು, ಹಿಂಗಾರು ಆರಂಭವಾಗುವುದರ ಜೊತಗೆ ಅರಬ್ಬಿ ಸಮುದ್ರ ಮತ್ತು ಉತ್ತರ ಶ್ರೀಲಂಕಾ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಹಿಂಗಾರು ಚುರುಕಾಗಿದ್ದು, ರಾಜ್ಯ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಮುಂದಿನ ಮೂರ್ನಾಲ್ಕು ದಿನ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ಕೊಲ್ಲೂರ, ಉಡುಪಿ, ಶಿರಾಲಿ, ಧರ್ಮಸ್ಥಳ, ಮಾಣಿ, ಸುಬ್ರಹ್ಮಣ್ಯ, ಮೂಡುಬಿದಿರೆ, ಹೊನ್ನಾವರ, ಆನವಟ್ಟಿ, ಸೊರಬ, ಪಣಂಬೂರ್, ಕಮಲಾಪುರ, ಸಂತೆ ಬೆನ್ನೂರು, ಚನ್ನಗಿರಿ, ವಿರಾಜಪೇಟೆ, ಸೋಮವಾರಪೇಟೆ, ಮುಲ್ಕಿ, ಕುಮಟಾ, ಆಗುಂಬೆ, ಹಾರಂಗಿ, ಭಾಗಮಂಡಲ, ಹುಂಚದಕಟ್ಟೆ, ಬೆಳ್ತಂಗಡಿ, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಿದೆ. ಕಾರ್ಕಳದಲ್ಲಿ 7 ಸೆಂ.ಮೀನಷ್ಟು ಮಳೆಯಾಗಿದೆ.

ಬೆಂಗಳೂರಲ್ಲಿ ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ಶನಿವಾರ ಸಂಜೆ ಅಥವಾ ರಾತ್ರಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಗರದಲ್ಲಿ ಗರಿಷ್ಠ 27.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.2 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 28.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.7 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಮಳೆ

ಮುಂದಿನ 48 ಗಂಟೆಗಳಲ್ಲಿ ಮಳೆ

ಹಿಂಗಾರು ಆಗಮನವಾಗಿದ್ದು, ಉತ್ತರ ಕರ್ನಾಟಕ, ಕರಾವಳಿ , ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಬೀದರ್‌ನಲ್ಲಿ ಅತಿ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+