ರೋಣ: ನಿರಂತರ ಮಳೆಯಿಂದಾಗಿ ಉಕ್ಕಿ ಹರಿದ ಬೆಣ್ಣೆಹಳ್ಳ, ಪ್ರವಾಹದ ಭೀತಿ

ಗದಗ, ಸೆಪ್ಟೆಂಬರ್ 25: ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಣ್ಣೆಹಳ್ಳ ತುಂಬಿ ಹರಿಯುತ್ತಿದೆ.

ನವಲಗುಂದ ಬಾಗಲಕೋಟೆ ಹೆದ್ದಾರಿಯಲ್ಲಿರುವ ಬೆಣ್ಣೆ ಹಳ್ಳದ ಮೇಲೆ ರಭಸವಾಗಿ ನೀರು ಹರಿಯುತ್ತಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ನೀರಿನ ಸುಳಿಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಇಬ್ಬರನ್ನು ಸ್ಥಳೀಯರು ರಕ್ಷಿಸಿ ದಡ ಸೇರಿಸಿದ್ದಾರೆ. ಅಷ್ಟೇ ಅಲ್ಲದೆ ಬೆಣ್ಣೆ ಹಳ್ಳ ಪಾತ್ರದಲ್ಲಿರುವ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.

Heavy rainfall in Gadag, flood in the Bennehalla

ತಾಲೂಕಿನ ಇತರ ಎಲ್ಲ ಕೆರೆ ಕಟ್ಟೆಗಳೂ ತುಂಬಿವೆ. ಈ ಹಿನ್ನಲೆಯಲ್ಲಿ ಜನಜೀವನ ಅಸ್ಥವ್ಯಸ್ಥಗೊಂಡಿದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಹಳೆ ದಾವಣಗೆರೆ ಭಾಗದಲ್ಲಿ ಮಳೆಯಿಂದಾಗಿ ಹೆಚ್ಚು ಹಾನಿ ಸಂಭವಿಸಿದ್ದು ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ.

ಮಳೆ ಇನ್ನೂ ನಾಲ್ಕು ದಿನ ಕರ್ನಾಟಕದಾದ್ಯಂತ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+