ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 5ರವರೆಗೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಜುಲೈ 3: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಅತಿ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

Heavy rain predicted ಇನ್ನೆರಡು ದಿನ ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರಿ ಮಳೆ | Karnataka | Oneindia Kannada

ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಜು.2ರಿಂದ ಜು.5ರವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದರ ಪ್ರಕಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸೂಚನೆ ನೀಡಲಾಗಿದೆ. ಉಳಿದಂತೆ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲೂ ಈ ಮಳೆ ಮುಂದುವರಿಯಲಿದೆ.

ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ, ಉಳಿದ ಜಿಲ್ಲೆಗಳಲ್ಲಿ ಸಾಧಾರಣಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ, ಉಳಿದ ಜಿಲ್ಲೆಗಳಲ್ಲಿ ಸಾಧಾರಣ

ಮಂಗಳೂರು ಮೂಡುಬಿದಿರೆಯ ಬೆಳುವಾಯಿಯಲ್ಲಿ ಗುರುವಾರ ಸಂಜೆವರೆಗೆ 107 ಮಿ.ಮೀ. ಮಳೆಯಾದರೆ, ಬಂಟ್ವಾಳದ ಕರಿಯಂಗಳದಲ್ಲಿ 97 ಮಿ.ಮೀ. ಮಳೆಯಾಗಿದೆ. ಸುಳ್ಯದ ಕೊಲ್ಲಮೊಗರು 65 ಮಿ.ಮೀ, ಬೆಳ್ತಂಗಡಿಯ ಅರಂಬೋಡಿಯಲ್ಲಿ 85 ಮಿ.ಮೀ ಮಳೆಯಾಗಿದೆ.

ಕರಾವಳಿಯಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕು ಕಂಡಿದೆ. ಬುಧವಾರ ರಾತ್ರಿಯಿಂದ ಸುರಿಯುತ್ತಿದ್ದ ಮಳೆ ಗುರುವಾರ ಕೂಡ ಮುಂದುವರಿದಿದೆ. ಮಂಗಳೂರಿನ ಕೆಲವು ತಗ್ಗು ಪ್ರದೇಶದಲ್ಲಿ ನೀರು ನುಗ್ಗಿದಂತೆ ಆವರಣ ಗೋಡೆಗಳು ಕುಸಿದು ಬಿದ್ದು ಮನೆಗಳಿಗೆ ಹಾನಿ, ರಸ್ತೆ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಎಲ್ಲೆಲ್ಲಿ ಧಾರಾಕಾರ ಮಳೆ?

ಎಲ್ಲೆಲ್ಲಿ ಧಾರಾಕಾರ ಮಳೆ?

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಕೊಡಗು ಚಿಕ್ಕಮಗಳೂರಿನಲ್ಲೂ ಸಾಧಾರಣ ಮಳೆಯಾಗಿದೆ.

ಕರಾವಳಿ ಭಾರಿ ಮಳೆ

ಕರಾವಳಿ ಭಾರಿ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 5ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದ್ದು, ಜುಲೈ 5ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೀದರ್‌ನಲ್ಲೂ ಮುಂಗಾರು ಚುರುಕು

ಬಾಗಲಕೋಟೆ, ಬೀದರ್‌ನಲ್ಲೂ ಮುಂಗಾರು ಚುರುಕು

ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಧಾರವಾಡದಲ್ಲಿ ಉತ್ತಮ ಮಳೆ

ಉತ್ತರ ಕನ್ನಡ, ಧಾರವಾಡದಲ್ಲಿ ಉತ್ತಮ ಮಳೆ

ಧಾರವಾಡ, ಉತ್ತರ ಕನ್ನಡ, ಬೆಳಗಾವಿ, ಬಳ್ಳಾರಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿಯ ಹೊರವಲಯದಲ್ಲಿ ಸೇತುವೆ ಕೊಚ್ಚಿ ಹೋಗಿದೆ.

English summary
Heavy rainfall is expected in the state for the next two days. Heavy rains are forecast in 10 districts of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X