ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka Rain : ಮಾ.28ರವರೆಗೆ ರಾಜ್ಯದ ಹಲವೆಡೆ ಮಳೆ; IMD ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಮಾರ್ಚ್ 26: ಕರ್ನಾಟಕದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ ಮತ್ತು ಹಾವೇರಿಯಲ್ಲಿ ಮಾರ್ಚ್​ 28ರವರೆಗೆ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.

ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಅಬ್ಬರಿಸಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೇಸಿಗೆಯಲ್ಲಿ ಜಾಸ್ತಿ ತಾಪಮಾನ ಉಂಟಾಗುವ ಸಾಧ್ಯತೆಯಿದ್ದರೂ, ಇನ್ನೆರಡು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

Heavy Rainfall In Several Parts of Karnataka Till March 28: IMD Forecast

ಶುಕ್ರವಾರ ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆ ಮುಂದುವರಿದಿದ್ದು, ಕೆಲವೆಡೆ ಸುರಿದ ಬಿರುಗಾಳಿ ಸಹಿತ ಮಳೆಗೆ ಆಸ್ತಿಪಾಸ್ತಿಗೆ ಧಕ್ಕೆಯಾಗಿದೆ. ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಹೊಸನಗರ ಮುಂತಾದ ಕಡೆಗಳಲ್ಲಿ ಅಕಾಲಿಕ ಮಳೆಯಾಗಿದೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಹೆಬೋಡಿ ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆ ಕುಸಿದು ಬಿದ್ದಿದೆ.

ಹೊಸನಗರ, ತೀರ್ಥಹಳ್ಳಿ ತಾಲೂಕಿನ ಹಲವೆಡೆ ಬಿರುಗಾಳಿಗೆ ಮರಗಳು ಉರುಳಿ ಬಿದ್ದಿವೆ. ಮೇಗರವಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಗಾತ್ರದ ಮರಗಳು ಉರುಳಿವೆ. ವಿದ್ಯುತ್ ಕಂಬಗಳು ಕೂಡ ಉರುಳಿಬಿದ್ದಿವೆ.

ಮಾರ್ಚ್​ 28ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಈ ಭಾಗದಲ್ಲಿ ಇಂದು ಗುಡುಗು, ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ಮಾರ್ಚ್​ 27, 28ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್​ 28ರವರೆಗೆ ಮಳೆಯಾಗಲಿದೆ.

Heavy Rainfall In Several Parts of Karnataka Till March 28: IMD Forecast

IMD ಪ್ರಕಾರ ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಮಾರ್ಚ್ 28ರವರೆಗೆ ಚದುರಿದ ಮಳೆಯಾಗಲಿದೆ. ಮುಂದಿನ ಸೋಮವಾರದ ನಂತರವೂ ಈ ರಾಜ್ಯಗಳಲ್ಲಿ ಆರ್ದ್ರ ಪರಿಸ್ಥಿತಿಗಳು ಮುಂದುವರಿಯಬಹುದು. ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾದಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ.

ಇನ್ನು 4 ದಿನಗಳ ಕಾಲ ಭಾರತದ ಈಶಾನ್ಯ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಚದುರಿದ ಅಥವಾ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ.

ಮುಂದಿನ 4 ದಿನಗಳವರೆಗೆ ಭಾರತದ ನೈಋತ್ಯ ಕರಾವಳಿಯಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯನ್ನು ತರುತ್ತದೆ. ಅರುಣಾಚಲ ಪ್ರದೇಶದಲ್ಲಿ ಇಂದು ಸಾಕಷ್ಟು ವ್ಯಾಪಕವಾದ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

English summary
The Department of Meteorology has forecasted another two days of Heavy rain in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X