ಮುಂದಿನ 2 ದಿನ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಡಿಸೆಂಬರ್ 17: ಮುಂದಿನ ಎರಡು ದಿನ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Recommended Video
ಅದರ ಜತೆಗೆ ಕರಾವಳಿಯಲ್ಲೂ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು,ಹಾಸನ, ಕೊಡಗು, ಮೈಸೂರು, ತುಮಕೂರಿನಲ್ಲಿ ಮಳೆಯಾಗಲಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆಯಲಿದೆ.ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ವಿಜಯಪುರದಲ್ಲಿ 12.4 ಡಿಗ್ರಿಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಇನ್ನು ದೇಶವನ್ನು ಗಮನಿಸುವುದಾದರೆ ಜಾರ್ಖಂಡ್ ಹಾಗೂ ಮಧ್ಯಪ್ರದೇಶದಲ್ಲಿ 5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್, ಮಧ್ಯಪ್ರದೇಶ, ಆಂಧ್ರಪ್ರದೇಶ, ತಮುಳಿನಾಡು, ಪುದುಚೆರಿಯಲ್ಲಿ ಮಳೆಯಾಗಲಿದೆ. ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ತಣ್ಣನೆಯ ಗಾಳಿ ಬೀಸುತ್ತಿದೆ.












Click it and Unblock the Notifications