ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಕನ್ನಡದಲ್ಲಿ ಭಾರಿ ಮಳೆ: ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್

|
Google Oneindia Kannada News

ಬೆಂಗಳೂರು, ಮಾರ್ಚ್ 18: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಭಾರಿ ಮಳೆಯಾಗಿದೆ. ಸಿದ್ದಾಪುರದ ಕೆಲವು ಭಾಗ, ಶಿರಸಿ ಸೇರಿದಂತೆ ಹಲವೆಡ ಮಳೆಯಾಗಿದೆ.

Recommended Video

Yediyurappa to give fresh directives about covid 19 | Yeddiyurappa | Karnataka | Oneindia kannada

ಮುಂದಿನ 48 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಕೂಡ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕರ್ನಾಟಕದ ಕರಾವಳಿ ಭಾಗ, ಉತ್ತರ ಕನ್ನಡ, ಕರ್ನಾಟಕದ ಉತ್ತರ ಒಳನಾಡು, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

rain

ಉಳಿದ ಕಡೆ ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು ಉಷ್ಣಾಂಶ ಅಂದರೆ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೀದರ್‌ನಲ್ಲಿ ಅತಿ ಕಡಿಮೆ ಅಂದರೆ 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

ಬೆಂಗಳೂರಿನಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲೂ ಮೋಡಕವಿದ ವಾತಾವರಣವಿರಲಿದ್ದು, ಉಷ್ಣಾಂಶ ಹೆಚ್ಚಲಿದೆ.

ದೆಹಲಿಯಲ್ಲಿ ಗುಡುಗು, ಆಲಿಕಲ್ಲು ಸಹಿತ ಭಾರಿ ಮಳೆದೆಹಲಿಯಲ್ಲಿ ಗುಡುಗು, ಆಲಿಕಲ್ಲು ಸಹಿತ ಭಾರಿ ಮಳೆ

ಕಳೆದ ಒಂದೆರೆಡು ದಿನಗಳ ಹಿಂದೆ ದೆಹಲಿ ಸೇರಿದಂತೆ ಹಲವೆಡೆ ಮಳೆಯಾಗಿತ್ತು. ಒಂದು ವಾರದ ಹಿಂದೆ ಬೆಂಗಳೂರಿನ ಕೆಲವಡೆ ಕೂಡ ಭಾರಿ ಮಳೆ ಸುರಿದಿತ್ತು.

English summary
Heavy rains in Uttara Kannada district on Tuesday. Meteorological department issued alert on 5 districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X