Karnataka Rains: ಬೆಂಗಳೂರು ಸೇರಿದಂತೆ 23 ಜಿಲ್ಲೆಗಳಿಗೆ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು, ಮೇ 16: ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಯನ್ನ ಆರಂಭಿಸಿದ್ದಾರೆ. ಕರ್ನಾಟಕದಾದ್ಯಂತ ಮೇ 17ರಿಂದ ಮಳೆ ಚುರುಕುಗೊಳ್ಳಲಿದ್ದು 23 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ದಾವಣಗೆರೆ, ಕಲಬುರಗಿ, ಚಿಕ್ಕಮಗಳೂರು, ರಾಮನಗರ, ರಾಯಚೂರು, ಬೆಳಗಾವಿ, ಮೈಸೂರು, ಹಾವೇರಿ, ಬೆಂಗಳೂರು ಸೇರಿ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರವೂ ಮಳೆಯಾಗಿದೆ.
ರಾಜಧಾನಿಯಲ್ಲಿ ಸತತ 4ನೇ ದಿನ ಪೂರ್ವ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಗುರುವಾರ ರಾತ್ರಿ ನಗರದ ಕೇಂದ್ರ ಹಾಗೂ ಉತ್ತರ ಭಾಗದ ವಿವಿಧ ಕಡೆ ಧಾರಾಕಾರ ಮಳೆಯಾಗಿದೆ. ಗುರುವಾರ ಬೆಳಗಿನ ಜಾವದವರೆಗೆ ಒಂದೇ ಸಮನೆ ಮಳೆ ಸುರಿಯಿತು. ಗುರುವಾರ ಬೆಳಗ್ಗೆಯಿಂದ ಸಾಮಾನ್ಯದಂತೆ ಬಿಸಿಲ ವಾತಾವರಣ ಕಂಡು ಬಂದಿತ್ತು. ಇನ್ನೂ ಮಧ್ಯಾಹ್ನದ ವೇಳೆ ಮೋಡ ಕವಿದ ವಾತಾವರಣ ಅಲ್ಲಲಿ ಕಂಡು ಬಂದಿತು. ಆದರೆ, ರಾತ್ರಿ 9 ಗಂಟೆ ಸುಮಾರು ಧಾರಾಕಾರವಾಗಿ ಮೆಜೆಸ್ಟಿಕ್, ಮಲ್ಲೇಶ್ವರ, ಗಾಂಧಿನಗರ, ಚಾಮರಾಜಪೇಟೆ, ಡಬ್ಬಲ್ ರಸ್ತೆ, ಶಾಂತಿನಗರ, ಎಂ,ಜಿ.ರಸ್ತೆ, ವಿಧಾನಸೌಧ, ಹೆಬ್ಬಾಳ, ಯಲಹಂಕ. ಜಕ್ಕೂರು, ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೇ 17ರಿಂದ ಭರ್ಜರಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಜಗಳೂರು, ಹರಪನಹಳ್ಳಿ, ಬೇಗೂರು, ಕೋಣನೂರು, ಚಿಂತಾಮಣಿ, ಚಿತ್ತಾಪುರ, ಹುಣಸೂರು, ಹೊಸಕೋಟೆ, ರಾಯಲ್ಪಾಡು, ಎಲೆಕ್ಟ್ರಾನಿಕ್ಸಿಟಿ, ಚಾಮರಾಜನಗರ, ಬೀದರ್, ಕಡೂರು, ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲೂ ಸಹ ಮಳೆಯಾಗಿದೆ.
ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇಂದಿನಿಂದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 7 ದಿನಗಳ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದ್ದು, ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೇ 16 ರಿಂದ 20 ರವರೆಗೆ ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.












Click it and Unblock the Notifications