Karnataka Rains: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ
ಬೆಂಗಳೂರು, ಏಪ್ರಿಲ್ 9: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು (ಶನಿವಾರ) ಮತ್ತು ನಾಳೆ (ಭಾನುವಾರ) ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ಇನ್ನು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏ.11ರವರೆಗೂ ಮಳೆ ಮುಂದುವರೆಯಲಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಿದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲೆ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಇಂದಿನಿಂದ 10ರವರೆಗೆ ಮಳೆ ಮುಂದುವರೆಯಲಿದೆ. ರಾಜ್ಯದ ಕರಾವಳಿ ಮಾತ್ರವಲ್ಲದೆ ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡು ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಮುಂದಿನ 3 ದಿನಗಳ ಕಾಲ ಉತ್ತರ ಭಾರತದ ಅರುಣಾಚಲ ಪ್ರದೇಶ, ಹಿಮಾಲಯ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಾಗಾಲ್ಯಾಂಡ್, ಮಣಿಪುರ, ತ್ರಿಪುರದಲ್ಲಿಯೂ ಸಾಧಾರಣ ಮಳೆಯಾಗಲಿದ್ದು, ಮುಂದಿನ ಒಂದೆರಡು ದಿನಗಳ ಕಾಲ ಲಕ್ಷದ್ವೀಪದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕಂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇಂದು ಅರುಣಾಚಲ ಪ್ರದೇಶ, ಹಿಮಾಲಯ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ ಮತ್ತು ಮೇಘಾಲಯದಲ್ಲಿಯೂ ಮಳೆಯಾಗುವ ನಿರೀಕ್ಷೆಯಿದೆ.

ಕೇರಳ ಮತ್ತು ಲಕ್ಷದ್ವೀಪ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ರಾಜಸ್ಥಾನ, ಗುಜರಾತ್, ಒಡಿಶಾ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್ತು ಛತ್ತೀಸ್‌ಗಢದಲ್ಲಿ ಬಿಸಿಗಾಳಿಯ ಪರಿಸ್ಥಿತಿಗಳು ಇರುತ್ತವೆ.
ದೇಶದ ಇತರ ಭಾಗಗಳಲ್ಲಿ ಶುಷ್ಕ ಹವಾಮಾನದ ಸಾಧ್ಯತೆಯಿದ್ದು, ಪಶ್ಚಿಮ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಹಿಮಾಚಲದ ಕೆಲವು ಭಾಗಗಳಲ್ಲಿ ಮತ್ತು ಪಂಜಾಬ್, ಉತ್ತರಪ್ರದೇಶ, ಜಾರ್ಖಂಡ್ ಮತ್ತು ಬಿಹಾರದಲ್ಲಿ ಬಿಸಿಗಾಳಿ ಉಂಟಾಗುವ ಸಾಧ್ಯತೆಯಿದೆ.












Click it and Unblock the Notifications