ನೈರುತ್ಯ ಮುಂಗಾರು: ಕೊಡಗು, ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ
ಬೆಂಗಳೂರು, ಜೂನ್ 9: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಸೋಮವಾರ ರಾಜ್ಯದ ಕರಾವಳಿ ಭಾಗ, ದಕ್ಷಿಣ ಒಳನಾಡು ಮತ್ತು ಉತ್ತರ ಕರ್ನಾಟಕದ ಹಲವೆಡೆ ಭಾರಿ ಮಳೆ ಸುರಿದಿದೆ.
ಉತ್ತರ ಕನ್ನಡ ಜಿಲ್ಲೆಯ ಆಂಕೋಲಾ ಮತ್ತು ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಧಾರಾಕಾರ ಮಳೆ ಸುರಿದಿದೆ. ಪರಿಣಾಮ, ವಿರಾಜಪೇಟೆಯ ಹಲವು ರಸ್ತೆಗಳು ಜಲಾವೃತವಾಗಿವೆ.
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮತ್ತು ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 4 ಸೆ.ಮೀ ಮಳೆಯಾಗಿದೆ. ಸತತ ಮಳೆ ಸುರಿಯುತ್ತಿರುವ ಕಾರವಾರದಲ್ಲಿ ಸೋಮವಾರ 3 ಸೆ.ಮೀ ಮಳೆಯಾಗಿದೆ.

ಎಲ್ಲೆಲ್ಲಿ ಮಳೆ.?
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ, ಶಿವಮೊಗ್ಗ ಜಿಲ್ಲೆಯ ಹೊಸನಗರ, ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ, ಮಂಡ್ಯ, ಕನಕಪುರ, ರಾಮನಗರದಲ್ಲಿ ಸೋಮವಾರ ಉತ್ತರ ಮಳೆಯಾಗಿದೆ.

ಮುಂದುವರೆಯುತ್ತಾ ಮಳೆ.?
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಮತ್ತು ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಮತ್ತು ಉತ್ತರ ಕರ್ನಾಟಕದ ಹಲವೆಡೆ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಿನಲ್ಲಿ ಹವಾಮಾನ.?
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಗುಡುಗು ಸಹಿ ಮಳೆಯಾಗುವ ಸಂಭವವೂ ಇದೆ.

ಬೆಂಗಳೂರಿನ ತಾಪಮಾನ
ಬೆಂಗಳೂರಿನಲ್ಲಿ ಸೋಮವಾರ ಗರಿಷ್ಠ 32.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.












Click it and Unblock the Notifications