ಅಂಕೋಲ, ಕೊಲ್ಲೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ
ಬೆಂಗಳೂರು, ಜೂನ್ 6: ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ ಕರಾವಳಿ ಭಾಗದ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಅನೇಕ ಪ್ರದೇಶಗಳಲ್ಲಿ ಶುಕ್ರವಾರ ಭಾರಿ ಮಳೆ ಸುರಿದಿದೆ.
Recommended Video
ಉತ್ತರ ಕನ್ನಡ ಜಿಲ್ಲೆಯ ಆಂಕೋಲಾದಲ್ಲಿ ಶುಕ್ರವಾರ 7 ಸೆ.ಮೀ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರು, ಶಿರಾಲಿ, ಕಾರವಾರ, ಹೊನ್ನಾವರ, ಕುಂದಾಪುರದಲ್ಲೂ ಧಾರಾಕಾರ ಮಳೆ ಸುರಿದಿದೆ.
ಗೋಕರ್ಣ, ಸಿದ್ದಾಪುರ, ಆಗುಂಬೆ, ವಿರಾಜಪೇಟೆ, ಕೊಟ್ಟಿಗೆಹಾರ, ಮೂಡುಬಿದಿರೆ, ಉಪ್ಪಿನಂಗಡಿ, ಸೊರಬ, ಶಿಕಾರಿಪುರದಲ್ಲಿ ಉತ್ತಮ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಶುಕ್ರವಾರ ಗರಿಷ್ಠ 31.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.












Click it and Unblock the Notifications