ಬೆಳಗಾವಿಯ ಬೈಲಹೊಂಗಲ ಮತ್ತು ಬೆಳವಾಡಿಯಲ್ಲಿ ಧಾರಾಕಾರ ಮಳೆ

ಬೆಂಗಳೂರು, ಮೇ 21: ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಧಾರಾಕಾರ ಮಳೆ ಸುರಿದಿದೆ. ಬೈಲಹೊಂಗಲ ಮತ್ತು ಬೆಳವಾಡಿಯಲ್ಲಿ 8 ಸೆ.ಮೀ ಮಳೆಯಾಗಿದೆ.

ಕರ್ನಾಟಕದ ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವೆಡೆ ಬುಧವಾರ ಭಾರಿ ಮಳೆಯಾಗಿದೆ.

ಅಥಣಿ, ರಾಣೆಬೆನ್ನೂರು, ಹಗರಿಬೊಮ್ಮನಹಳ್ಳಿ, ಸರಗೂರು, ಗದಗ, ದಾವಣಗೆರೆ, ಸುಬ್ರಹ್ಮಣ್ಯ, ಹುಕ್ಕೇರಿ, ಕಿತ್ತೂರು, ಹರಪ್ಪನಹಳ್ಳಿ, ಮಾಲೂರು, ಮಡಿಕೇರಿ, ಆಗುಂಬೆ ಮತ್ತು ಹರಿಹರದಲ್ಲಿ ಸಾಧಾರಣ ಮಳೆ ಬಂದಿದೆ.

Heavy Rainfall Occured At Bailhongal and Belwadi in Belagavi On May 20th

ಬೆಂಗಳೂರಿನಲ್ಲಿ ಗರಿಷ್ಠ 33.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರಿನಲ್ಲಿ ಅತಿ ಹೆಚ್ಚು ಅಂದ್ರೆ 41.3 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+