ಚುರುಕುಗೊಂಡ ಮುಂಗಾರು: ಕರಾವಳಿಯ ಹಲವೆಡೆ ಭಾರಿ ಮಳೆ
ಬೆಂಗಳೂರು, ಜೂನ್ 10: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಮಂಗಳವಾರ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿದೆ.
Recommended Video
Sriramulu taking a break at a small shop video goes viral | Oneindia Kannada
ಪಣಂಬೂರು, ಮಂಗಳೂರು, ಬೆಳ್ತಂಗಡಿ, ಸುಬ್ರಹ್ಮಣ್ಯ, ಮುಲ್ಕಿ, ಕೋಟಾ, ಹೊನ್ನಾವರ, ಕಾರವಾರ, ಆಂಕೋಲಾ, ಗೋಕರ್ಣ, ಭಟ್ಕಳದಲ್ಲಿ ಮಂಗಳವಾರ ಭಾರಿ ಮಳೆ ಸುರಿದಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ, ದಕ್ಷಿಣ ಒಳನಾಡು ಮತ್ತು ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಗುಡುಗು ಸಹಿತ ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮಂಗಳವಾರ ಗರಿಷ್ಠ 30.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.












Click it and Unblock the Notifications