ಏಪ್ರಿಲ್ 30ರಂದು ರಾಜ್ಯದಲ್ಲಿ ಭಾರಿ ಮಳೆ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಏಪ್ರಿಲ್ 26: ರಾಜ್ಯದಲ್ಲಿ ಏಪ್ರಿಲ್ 30 ರಂದು ಭಾರಿ ಮಳೆ ಸುರಿಯಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯೆಲ್ಲೋ ಅಲರ್ಟ್ ಘೋಷಿಸಿರುವ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದೆ, ಸಂಜೆಯ ಹೊತ್ತು ಮನೆಯಿಂದ ಹೊರ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಕನ್ನಡದಲ್ಲೂ ಮಳೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಏಪ್ರಿಲ್ 26 ರಿಂದ 30ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಏಪ್ರಿಲ್ 30ರವರೆಗೆ ಮಳೆಯಾಗಲಿದೆ. ಏಪ್ರಿಲ್ 30 ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಏಪ್ರಿಲ್ 30 ರಂದು ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗದಲ್ಲಿ ಮಳೆಯಾಗಲಿದೆ.
Recommended Video

ಎಲ್ಲೆಲ್ಲಿ ಮಳೆಯಾಗಿದೆ
ತ್ಯಾಗರ್ತಿ, ಚಿಂತಾಮಣಿ, ಜಯಪುರ, ಶಿಡ್ಲಘಟ್ಟ, ಕಳಸ, ಸಾಗರ, ಕಿರವತ್ತಿ, ಯಲಬುರ್ಗಾ, ಹುಣಸೂರು, ಮದ್ದೂರು, ಚನ್ನರಾಯಪಟ್ಟಣದಲ್ಲಿ ಮಳೆಯಾಗಿದೆ.












Click it and Unblock the Notifications