ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜನವರಿ 8ರವರೆಗೂ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಜನವರಿ 08:ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜನವರಿ 8ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಭಾನುವಾರ ರಾತ್ರಿ ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಭಾರಿ ಮಳೆಯಾಗಿದೆ. ಮುಂದಿನ ಮೂರ್ನಾಲ್ಕು ದಿನ ಇದೇ ವಾತಾವರಣ ಮುಂದುವರೆಯಲಿದ್ದು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಎರು ದಿನ ಒಣಹವೆ ಇರಲಿದ್ದು, ಜನವರಿ 7-8ರಂದು ಮಳೆಯಾಗುವ ಸಾಧ್ಯತೆ ಇದೆ, ಇನ್ನು ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಜನವರಿ 8ರವರೆಗೂ ಮುಂದುವರೆಯಲಿದೆ.

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿಲ್ಲಿ ಮುಂದಿನ 48 ಗಂಟೆ ಮೋಡಕವಿದ ವಾತಾವರಣವಿರಲಿದೆ, ಬೆಳಗ್ಗೆ ಮಂಜು ತುಂಬಿರಲಿದೆ. 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ.

ಹೆಚ್ಚು ಕನಿಷ್ಠ ಉಷ್ಣಾಂಶ ದಾಖಲಾಗಿದ್ದೆಲ್ಲಿ?

ಹೆಚ್ಚು ಕನಿಷ್ಠ ಉಷ್ಣಾಂಶ ದಾಖಲಾಗಿದ್ದೆಲ್ಲಿ?

ಬೀದರ್‌ನಲ್ಲಿ 10.2 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಇಲ್ಲಿ ಮುಂದಿನ ನಾಲ್ಕು ದಿನವೂ ಮಳೆ ಬರುವ ಸಾಧ್ಯತೆ ಕಡಿಮೆ ಇದ್ದು, ಚಳಿ ಹಾಗೂ ಒಣಹವೆ ಮುಂದುವರೆಯಲಿದೆ.

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನಲ್ಲಿ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ,ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗಲಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ?

ಯಾವ್ಯಾವ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ?

ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+