ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಮುಂಗಾರು ಚುರುಕು, ಮುಂದಿನ 3 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಜೂನ್ 11: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ 3 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು, ಕೊಡಗು, ಮೈಸೂರು, ಮಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚು ಮಳೆಯಾಗಲಿದೆ.

ರಾಜ್ಯದಲ್ಲಿ ಈ ಸಾಲಿನ ಮುಂಗಾರು ಮಳೆ ಇಂದಿನಿಂದ ರಾಜ್ಯಾದ್ಯಂತ ತೀವ್ರವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಜೂನ್ 13 ಹಾಗೂ 14ರಂದು ಮಳೆಯ ಆರ್ಭಟ ಜೋರುರಾಜ್ಯದಲ್ಲಿ ಜೂನ್ 13 ಹಾಗೂ 14ರಂದು ಮಳೆಯ ಆರ್ಭಟ ಜೋರು

ಜೂನ್​ ನಿಂದ ಸೆಪ್ಟೆಂಬರ್​ ವರೆಗಿನ ನಾಲ್ಕು ತಿಂಗಳ ಮುಂಗಾರು ಸಾಲಿನಲ್ಲಿ ಭಾರತದಲ್ಲಿ ಶೇ. 70ರಷ್ಟು ಮಳೆಯಾಗುತ್ತದೆ. ಇದು ಅಕ್ಕಿ, ಸೋಯಾಬೀನ್, ಹತ್ತಿ ಬೆಳೆಗೆ ನಿರ್ಣಾಯಕವಾಗಿರುತ್ತದೆ. ಕಳೆದ ಎರಡು ವರ್ಷಗಳಿಂದ ಇದು ಉತ್ತಮವಾಗಿದೆ. ಕೊವಿಡ್​ ಸೋಂಕು ಕಾಲದಲ್ಲೂ ಕಳೆದ ವರ್ಷ ಉತ್ತಮ ಮಳೆಯಾಗಿ ರೈತಾಪಿ ರ್ಗಕ್ಕೆ ಆಶಾದಾಯಕವಾಗಿತ್ತು. ರೈತರು ಈ ಬಾರಿಯೂ ಇದೇ ನಿರೀಕ್ಷೆಯಲ್ಲಿದ್ದಾರೆ.

 ಒಂದು ವಾರ ಎಲ್ಲೆಡೆ ಮಳೆ

ಒಂದು ವಾರ ಎಲ್ಲೆಡೆ ಮಳೆ

ಜೂನ್ 12ರಿಂದ ಒಂದು ವಾರಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನಲ್ಲಿಯೂ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 ಮಲೆನಾಡಿನಲ್ಲಿ ಮಳೆ

ಮಲೆನಾಡಿನಲ್ಲಿ ಮಳೆ

ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ, ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.

 ಆರೆಂಜ್ ಅಲರ್ಟ್

ಆರೆಂಜ್ ಅಲರ್ಟ್

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಜೂನ್ 15 ರವರೆಗೆ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಆ ನಂತರವೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಈ ನಡುವೆ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ.

 ಗುಡುಗು ಸಹಿತ ಮಳೆ

ಗುಡುಗು ಸಹಿತ ಮಳೆ

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 3 ದಿನ ಗುಡುಗು ಸಿಡಿಲು ಸಹಿತ ಮಳೆ ಬೀಳಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಯಿದೆ ಎಂದೂ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್​ಡಿಆರ್​ಎಫ್​ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಬಿಡುಗಡೆಗೊಳಿಸಿದ ವರದಿಯನುಸಾರ ಎರಡನೆಯ ದೀರ್ಘಾವಧಿ ಅಂದಾಜಿನಲ್ಲಿ ಈ ಬಾರಿ ಮುಂಗಾರು ಪ್ರಮಾಣ ಶೇ. 101ರಷ್ಟಿರಲಿದೆ. ಇದು ಎರಡು ವರ್ಷಗಳ ದೀರ್ಘಾವಧಿ ಸರಾಸರಿ (LPA) ಮಳೆ ಪ್ರಮಾಣದ ಆಧಾರದಲ್ಲಿದೆ. LPA ಅಂದ್ರೆ ದೀರ್ಘಾವಧಿ ಮಳೆ ಸರಾಸರಿ 88 ಸೆಂಟಿ ಮೀಟರ್ ಪ್ರಮಾಣದಲ್ಲಿರುತ್ತದೆ. ಇದನ್ನು 1961ರ ಮತ್ತು 2010ರ ನಡುವೆ ಜೂನ್​ ಮತ್ತು ಸೆಪ್ಟೆಂಬರ್ ತಿಂಗಳಲ್ಲಾದ ​ಮಳೆಯನ್ನಾಧರಿಸಿ ಅಂದಾಜು ಮಾಡಲಾಗಿದೆ.

English summary
Meteorological department predicted that Heavy Rainfall Will Continue Over Coastal Districts Of Karnataka Next 3 Days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X