ವಾಯುಭಾರ ಕುಸಿತ: ರಾಜ್ಯದ 7 ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ

ಬೆಂಗಳೂರು, ಜುಲೈ 12: ರಾಜ್ಯದಲ್ಲಿ ಜುಲೈ 14ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಶುರುವಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ

ಜುಲೈ 12 ಮತ್ತು 13 ರಂದು ಆರೆಂಜ್‌ ಅಲರ್ಟ್‌ ಹಾಗೂ ಜುಲೈ 14 ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 14ರ ತನಕ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಭಾನುವಾರ ರೆಡ್‌ ಅಲರ್ಟ್‌ ಘೋಷಿಸಲಾಗಿತ್ತು.

 ಯಾವ್ಯಾವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಯಾವ್ಯಾವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 14ರ ತನಕ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಭಾನುವಾರ ರೆಡ್‌ ಅಲರ್ಟ್‌ ಘೋಷಿಸಲಾಗಿತ್ತು.

 ಎಲ್ಲೆಲ್ಲಿ ಮಳೆಯಾಗಿದೆ?

ಎಲ್ಲೆಲ್ಲಿ ಮಳೆಯಾಗಿದೆ?

ಆಗುಂಬೆಯಲ್ಲಿ 13 ಸೆಂ.ಮೀ, ಮಂಕಿಯಲ್ಲಿ 12 ಸೆಂ.ಮೀ ಮಳೆಯಾಗಿದೆ. ಕೋಟ, ಕುಂದಾಪುರ, ಭಟ್ಕಳ, ಶಿರಾಲಿ, ಕೊಲ್ಲೂರು, ಉಪ್ಪಿನಂಗಡಿ, ಪಣಂಬೂರು, ಭಾಗಮಂಡಲದಲ್ಲಿ ಮಳೆಯಾಗಿದೆ. ಹೊನ್ನಾವರ, ಸುಬ್ರಹ್ಮಣ್ಯ, ಸಿದ್ದಾಪುರ, ಮೂಡುಬಿದಿರೆ, ಬೆಳ್ತಂಗಡಿ, ಮಡಿಕೇರಿ, ಗಂಗಾಪುರ, ಮಾಣಿ, ಬೆಳ್ತಂಗಡಿ, ಯಲ್ಲಾಪುರ, ತಾಳಿಕೋಟೆ, ಕದ್ರ, ಯಲ್ಲಾಪುರ, ಲಿಂಗನಮಕ್ಕಿ, ಮಂಚಿಕೆರೆ, ಶಿರಹಟ್ಟಿ, ಹುಂಚದಕಟ್ಟೆ, ಜಯಪುರ, ಸೋಮವಾರಪೇಟೆ, ಕಳಸ, ಕೊಪ್ಪ, ತಾಳಗುಪ್ಪ, ಸಾಗರ, ಬಂಡೀಪುರದಲ್ಲಿ ಮಳೆಯಾಗಿದೆ.

Recommended Video

    ಸುಮಲತಾ ವಿಡಿಯೋ ಬಿಡುಗಡೆ ಮಾಡಿದ ಶರವಣ | Oneindia Kannada
     ಬೆಂಗಳೂರು ಹವಾಮಾನ ಹೇಗಿದೆ?

    ಬೆಂಗಳೂರು ಹವಾಮಾನ ಹೇಗಿದೆ?

    ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+