ಆಗಸ್ಟ್ 24ರವರೆಗೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಿಗೆ ಮಳೆಯ ಯೆಲ್ಲೋ ಅಲರ್ಟ್

ಬೆಂಗಳೂರು, ಆಗಸ್ಟ್ 20: ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಆಗಸ್ಟ್ 24ರವರೆಗೂ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಬುಧವಾರ ಇಡೀ ದಿನ ಮೋಡ, ತಂಪು ಹವೆ ಕಂಡುಬಂದಿದೆ. ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಅರಂಭವಾಗಿದೆ. ಮಲೆನಾಡು ಹಾಗು ಕರಾವಳಿ ಪ್ರದೇಶದಲ್ಲಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗ್ರಾಮಾಂತರದ ಅಲ್ಲಲ್ಲಿ ತುಸು ಮಳೆ ಹನಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹೆಚ್ಚಿನ ಮಳೆಯ ಸಂಭವವನ್ನು ಹವಾಮಾನ ಇಲಾಖೆ ತಿಳಿಸಿದೆ. ಆ.22ರ ವರೆಗೂ ಮಳೆ ಹೆಚ್ಚಾಗಲಿದ್ದು, ಕರಾವಳಿಯಲ್ಲಿ ಮಳೆ ತೀವ್ರತೆ ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಜಿಲ್ಲೆಯಲ್ಲಿ ಬುಧವಾರ ಹಗಲು ಹೊತ್ತು ಮಳೆ ಇಲ್ಲದಿದ್ದರೂ ಬಿಸಿಲು ಇರಲಿಲ್ಲ. ಅಪರಾಹ್ನ ಮಂಗಳೂರಿನಲ್ಲಿ ಒಮ್ಮೆ ಬಿಸಿಲು ಇಣುಕಿದ್ದು ಬಿಟ್ಟರೆ ಮತ್ತೆ ಮೋಡ ಆವರಿಸಿತ್ತು. ಸಂಜೆಗೂ ಮೊದಲೇ ಮಳೆಯ ವಾತಾವರಣ ಗೋಚರಿಸಿತ್ತು.

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಭಾರೀ ಕಡಿಮೆಯಾಗಿದೆ. ಜೂನ್ ಮತ್ತು ಜುಲೈನಲ್ಲಿ ಸುರಿದ ಭಾರೀ ಮಳೆಯಿಂದ ಈ ಭಾಗದಲ್ಲಿ ಪ್ರವಾಹ ಉಂಟಾಗಿತ್ತು. ಆದರೀಗ ಬಿಸಿಲಿನ ಕಾವು ಹೆಚ್ಚಾಗಿದೆ. ಆಗಸ್ಟ್​ ತಿಂಗಳಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಮಳೆಗಿಂತಲೂ ಶೇ. 47ರಷ್ಟು ಕಡಿಮೆ ಪ್ರಮಾಣದ ಮಳೆಯಾಗಿದೆ.

ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಇಂದು ಮಳೆ ಮುಂದುವರೆಯಲಿದೆ. ಈಗಾಗಲೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ.

ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ಮುಂತಾದ ಕಡೆಗಳಲ್ಲಿ ಕಳೆದ ವರ್ಷಗಳಿಗಿಂತ ಹೆಚ್ಚು ಮಳೆಯಾಗಿದೆ. ಈ ಬಾರಿ ತುಂಗಭದ್ರಾ ಹಾಗೂ ಘಟಪ್ರಭಾ ಜಲಾಶಯದಲ್ಲಿ ನೀರು ಭರ್ತಿಯಾಗಿದೆ.

 ಮುಂದಿನ 4 ದಿನ ಮಳೆ

ಮುಂದಿನ 4 ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಇಂದಿನಿಂದ 3 ದಿನ ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದೆ.
ಈಗಾಗಲೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲೂ ಮಳೆ ಹೆಚ್ಚಾಗಿದೆ. ಇಂದು ಸಂಜೆ ಸಹ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಭಾಗಮಂಡಲದಲ್ಲಿ 13 ಸೆಂ.ಮೀ ಮಳೆಯಾಗಿದೆ, ಸುಬ್ರಹ್ಮಣ್ಯ, ಮುಲ್ಕಿ, ಕೊಟ್ಟಿಗೆಹಾರ, ಭೀಮರಾಯನಗುಡಿ, ಮಂಗಳೂರು, ಕೋಟ, ಸುಳ್ಯ, ಶೃಂಗೇರಿ, ಹೊನ್ನಾವರ, ಕೆಂಭಾವಿ, ಮಂಕಿ, ಯಲಬುರ್ಗಾ, ಗೋಕರ್ಣ, ಶಿರಾಲಿ, ವಿರಾಜಪೇಟೆ, ಜಯಪುರ, ಕಿರವತ್ತಿ, ಅಫ್ಜಲ್‌ಪುರ, ಅಡಕಿ, ವಿಟ್ಲ, ಪುತ್ತೂರು, ಕಲ್ಘಟಗಿ, ಔರದ್, ಶಿಗ್ಗಾಂವ್, ತಾಳಗುಪ್ಪ, ತ್ಯಾಗರ್ತಿ, ಹೆಬ್ಬೂರು, ಬಾಳೆಹೊನ್ನೂರು, ಬಂಡೀಪುರ, ಕಂಪ್ಲಿ, ಸಕಲೇಶಪುರ, ಸಾಲಿಗ್ರಾಮದಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಆಗಾಗ ಮಳೆಯಾಗಲಿದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಕರಾವಳಿ ಜಿಲ್ಲೆಗಳಲ್ಲಿ ಮಳೆ

ಕರಾವಳಿ ಜಿಲ್ಲೆಗಳಲ್ಲಿ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿ ವಾಡಿಕೆಗಿಂತ ಈಗಾಗಲೇ ಶೇ. 48ರಷ್ಟು ಮಳೆ ಕಡಿಮೆಯಾಗಿದೆ. ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇಂದು ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲೂ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ಬಳಿಕ ಮಳೆಯಾಗುವ ಸಾಧ್ಯತೆಯಿದೆ.

Recommended Video

      ಬಯಲಾಯ್ತು ಭಾರತದಲ್ಲಿ ತೆರಿಗೆ ಕಟ್ಟದೆ ವಂಚಿಸಿದ್ದ ಚೀನಾ ಕಂಪನಿಯ ಮಹಾಮೋಸ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+