ಮುಂದಿನ 2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಮೇ 25: ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

      ಹವಾಮಾನ ಇಲಾಖೆಯಿಂದ ಭಾರಿ ಮಳೆ ಸೂಚನೆ! ಮೀನುಗಾರರಿಗೆ ಎಚ್ಚರಿಕೆ | Oneindia Kannda

      ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಧಾರವಾಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

      ಕಲಬುರಗಿಯಲ್ಲಿ 39.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಯಾಸ್ ಚಂಡಮಾರುತವು ಮೇ 26 ರಂದು ಪೂರ್ವ ಕರಾವಳಿಯನ್ನು ತಟ್ಟಲಿದ್ದು, ಗಂಟೆಗೆ 155 ರಿಂದ 165 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

      ನಂತರ ಇದು ಗಂಟೆಗೆ 185 ಕಿ.ಮೀ ವೇಗಕ್ಕೆ ವರ್ಧಿಸಲಿದೆ, ಭಾರಿ ಮಲೆಯಿಂದಾಗಿ ಬಾಲಸೋರ್‌ನಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆ ಇದೆ.

       ಮುಂಚಿತವಾಗಿ ಮುಂಗಾರು?

      ಮುಂಚಿತವಾಗಿ ಮುಂಗಾರು?

      ಈ ಮೊದಲ ಲೆಕ್ಕಾಚಾರ ಪ್ರಕಾರ ಈ ವರ್ಷದಮುಂಗಾರು ಕರ್ನಾಟಕಕ್ಕೆಜೂ.3 ಅಥವಾ 4ಕ್ಕೆ ಆಗಮಿಸಬೇಕಿತ್ತು. ಆದರೆ, ಯಾಸ್ ಚಂಡಮಾರುತದಿಂದಾಗಿ ಮುಂಗಾರು ಮಾರುತಗಳು ಕರ್ನಾಟಕಕ್ಕೆ ನಾಲ್ಕು ದಿನ ಮುಂಚಿತವಾಗಿಯೇ ಪ್ರವೇಶಿಸಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಹಾಗಾಗಿ ಮೇ 30 ಅಥವಾ 31ಕ್ಕೆಕರ್ನಾಟಕಕ್ಕೆ ಮುಂಗಾರು ಆಗಮಿಸಬಹುದು.

       ಚಂಡ ಮಾರುತದಿಂದ ಈಶಾನ್ಯ ರಾಜ್ಯಗಳಿಗೆ ಹಾನಿ

      ಚಂಡ ಮಾರುತದಿಂದ ಈಶಾನ್ಯ ರಾಜ್ಯಗಳಿಗೆ ಹಾನಿ

      ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗಳ ಪ್ರಾಂತ್ಯಗಳಲ್ಲಿ ಬಿರುಗಾಳಿ ಸಹಿತ ಅಗಾಧವಾಗಿ ಮಳೆಯಾಗಲಿದೆ. ಈ ಎರಡೂ ರಾಜ್ಯಗಳ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಿಂದಲೇ ಯಾಸ್‌ನ ಮಾರುತಗಳು ಆಗಮಿಸಲಿರುವುದರಿಂದ ಪ್ರಮುಖವಾಗಿ ಆ ಪ್ರದೇಶದಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ನಡೆಸದಂತೆ ಅಂಡಮಾನ್-ನಿಕೋಬಾರ್ ದ್ವೀಪಗಳ ಮೀನುಗಾರರಿಗೂ ಸೂಚಿಸಲಾಗಿದೆ.

       ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

      ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

      ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

      ಎಚ್‌ಎಎಲ್‌ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
       ಮಳೆಯಾಗಿರುವ ಪ್ರದೇಶಗಳು

      ಮಳೆಯಾಗಿರುವ ಪ್ರದೇಶಗಳು

      ಗದಗ, ಬೆಳಗಾವಿ, ಕೆಂಭಾವಿ, ಯಾದಗಿರಿ, ಜಾಲಹಳ್ಳಿ, ಕದ್ರ, ಚಿಕ್ಕೋಡಿ, ಅಥಣಿ, ಇಳಕಲ್, ತಾಳಿಕೋಟೆ,ಕಲಬುರಗಿ, ಚಿಕ್ಕಮಗಳೂರಿನಲ್ಲಿ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಧಾರವಾಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+