ಮೇ 30ರಿಂದ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಮೇ 28: ರಾಜ್ಯದಲ್ಲಿ ಮೇ 30ರಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗೆಯೇ ಮೇ 28ರಿಂದ ಜೂನ್ 2ರವರೆಗೂ ರಾಜ್ಯದ ಅಲ್ಲಲ್ಲಿ ಮಳೆಯಾಗಲಿದೆ.

ರಾಜ್ಯದ ಬಹುತೇಕ ಭಾಗಗಳ ಹವಾಮಾನ ಕಳೆದ ಒಂದೆರೆಡು ವಾರಗಳಿಂದ ಮಳೆಗಾಲದಂತಾಗಿದ್ದು, ಮೇ ತಿಂಗಳ ಬಿರು ಬೇಸಿಗೆ ಮರೆಯಾಗಿದೆ. ತೌಕ್ತೆ ಚಂಡಮಾರುತದ ಪರಿಣಾಮ ಕರಾವಳಿ, ಮಲೆನಾಡು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾದ ನಂತರ ಯಾಸ್​ ಅಡ್ಡ ಪರಿಣಾಮವೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಸುರಿದಿದೆ.

ಮುಂದಿನ ಮೂರ್ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.

 ಮಲೆನಾಡಿನಲ್ಲಿ ಮಳೆ

ಮಲೆನಾಡಿನಲ್ಲಿ ಮಳೆ

ಮಲೆನಾಡಿನಲ್ಲಿ ಬೆಳಗ್ಗೆ ಮೋಡಕವಿದ ವಾತಾವರಣವಿದ್ದು, ತಡವಾಗಿ ಸೂರ್ಯ ಕಾಣಿಸಿಕೊಳ್ಳಲಿದ್ದಾನೆ, ಮಧ್ಯಾಹ್ನದ ನಂತರ ದಿನನಿತ್ಯದಂತೆ ತುಸು ಮಳೆ ಸುರಿಯಬಹುದೆಂಬ ನಿರೀಕ್ಷೆ ಇದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

 ಉತ್ತರ ಒಳನಾಡಿನಲ್ಲಿ ವಾತಾವರಣ ಹೇಗಿದೆ?

ಉತ್ತರ ಒಳನಾಡಿನಲ್ಲಿ ವಾತಾವರಣ ಹೇಗಿದೆ?

ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪ ಕೊಂಚ ಹೆಚ್ಚಿರಲಿದ್ದು, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಬೀದರ್ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಮುಲ್ಕಿ, ಪಣಂಬೂರು, ಮೂಡುಬಿದಿರೆ, ಮಂಗಳೂರು, ಕೋಟ, ರಾಮನಗರ, ಸುಬ್ರಹ್ಮಣ್ಯ, ವಿಟ್ಲ, ಧರ್ಮಸ್ಥಳ, ರಾಯಚೂರು, ಮಾಗಡಿಯಲ್ಲಿ ಮಳೆಯಾಗಿದೆ. ಮುಂದಿನ ಮೂರ್ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.

 ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+