ಅಕ್ಟೋಬರ್ 31ರವರೆಗೆ ಕರ್ನಾಟಕದ 11 ಜಿಲ್ಲೆಗಳಲ್ಲಿ ಅಧಿಕ ಮಳೆ

ಬೆಂಗಳೂರು, ಅಕ್ಟೋಬರ್ 27: ಕರ್ನಾಟಕದ 11 ಜಿಲ್ಲೆಗಳಲ್ಲಿ ಅಕ್ಟೋಬರ್ 31ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯಲ್ಲೊ ಒಣಹವೆ ಇರಲಿದೆ.

ರಾಜ್ಯಕ್ಕೆ ಅಕ್ಟೋಬರ್‌ 27ರಿಂದ ಈಶಾನ್ಯ ಮಾರುತಗಳು ಪ್ರವೇಶವಾಗಲಿದ್ದು, ಹಿಂಗಾರು ಮಳೆ ಸುರಿಯಲಿದೆ. ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಗೆ ಕಾರಣವಾಗಲಿವೆ.

ಕರಾವಳಿಯಲ್ಲಿ ಸಾಧಾರಣ ಮಳೆ ಸುರಿಸುತ್ತವೆ. ಉತ್ತರ ಒಳನಾಡಿನ ಜಿಲ್ಲೆಗಳ ಮೇಲೆ ಅಷ್ಟೊಂದು ಪ್ರಭಾವ ಬೀರುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಅ.27ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹೆಚ್ಚು ಮಳೆಯಾಗಲಿದ್ದು , ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ , ಉಡುಪಿ , ಉತ್ತರ ಕನ್ನಡ, ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯ ಕೆಲವು ಭಾಗದಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿನ ಮೇಲ್ಮೈ ಸುಳಿಗಾಳಿ ಮತ್ತು ಮುಂಗಾರು ಮಾರುತದ ಇರುವಿಕೆ ರಾಜ್ಯ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಗೆ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಐದು ದಿನಗಳವರೆಗೆ ಮಳೆಯಾಗುವ ಸೂಚನೆ ಇತ್ತು, ಅದರ ಪ್ರಭಾವ ತಗ್ಗಿದ್ದರಿಂದ ಮಳೆಯೂ ಕಡಿಮೆಯಾಗಿದೆ.

ಅ.29ರಿಂದ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇದೇ 30ರಿಂದ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಲೋಂಡಾ, ಆಗುಂಬೆ, ಜಗಲ್‌ಪೇಟೆ, ಮೈಸೂರು, ಕೆಆರ್‌ನಗರ, ಕೃಷ್ಣರಾಜಸಾಗರ, ಪುತ್ತೂರು, ನಾಪೋಕ್ಲು, ಮಡಿಕೇರಿ, ಕಳಸ, ಸುಳ್ಯ, ಪಾಂಡವಪುರ, ಶ್ರೀರಂಗಪಟ್ಟಣ, ನಾಗನಹಳ್ಳಿ, ಶುಂಟಿಕೊಪ್ಪ, ಕಮ್ಮರಡಿ, ಹಾರಂಗಿ, ಮೂಡುಬಿದಿರೆ, ಬೆಳ್ತಂಗಡಿ, ಮಾಣಿ, ಉಪ್ಪಿನಂಗಡಿ, ಸೌದತ್ತಿ, ಭಾಗಮಂಡಲ, ಕುಶಾಲನಗರ, ಬಂಡೀಪುರ, ಮದ್ದೂರು, ಸರಗೂರು, ಭದ್ರಾವತಿ ಜಿಲ್ಲೆಗಳಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ಸಂದರ್ಭದಲ್ಲಿ ಸ್ವಲ್ಪ ಬಿಸಿಲು ಕಾಣಿಸಿಕೊಳ್ಳಲಿದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 24 ಗಂಟೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹೇಳಲಾಗಿದೆ.ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯಲ್ಲೊ ಒಣಹವೆ ಇರಲಿದೆ.
 ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿರುವುದೆಲ್ಲಿ?

ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿರುವುದೆಲ್ಲಿ?

ಶಿರಾಲಿಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಬೀದರ್‌ನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+