ಏಪ್ರಿಲ್ 6 ರಿಂದ 10ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಏಪ್ರಿಲ್ 5: ರಾಜ್ಯದಲ್ಲಿ ಏಪ್ರಿಲ್ 6 ರಿಂದ ಏಪ್ರಿಲ್ 10ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಏಪ್ರಿಲ್ 6 ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ.
ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಏಪ್ರಿಲ್ 9 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಬೀಳಲಿದೆ.
ಏಪ್ರಿಲ್ 10 ರಂದು ದಕ್ಷಿಣ, ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಏಪ್ರಿಲ್ 7ರವರೆಗೆ ಬೆಂಗಳೂರು ವಾತಾವರಣ ಹೇಗಿರಲಿದೆ?
ಏಪ್ರಿಲ್ 7ರವರೆಗೆ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ. ನಗರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಲ್‌ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ
ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನಗಳಕಾಲ ಒಣಹವೆ ಇರಲಿದ್ದು, ಏಪ್ರಿಲ್ 8 ರಿಂದ 10ರವರೆಗೆ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರಿನಲ್ಲಿ ಮಳೆಯಾಗಲಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
Recommended Video

ಕಲಬುರಗಿಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲು
ಕಲಬುರಗಿಯಲ್ಲಿ 41.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 6 ರಿಂದ 10ರವರೆಗೆ ಮಳೆಯಾಗಲಿದೆ.












Click it and Unblock the Notifications