ನವೆಂಬರ್ 1 ರಂದು ರಾಜ್ಯದ 12 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಅಕ್ಟೋಬರ್ 29: ರಾಜ್ಯದ 12 ಜಿಲ್ಲೆಗಳಲ್ಲಿ ನವೆಂಬರ್ 1 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ.
ನಿರಂತರ ಮಳೆಯಿಂದಾಗಿ ಸಂಕಷ್ಟದಲ್ಲಿ ಸಿಲುಕಿರುವ ಕೇರಳದಲ್ಲಿ ಮತ್ತೆ ವರುಣ ದೇವ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳ ಮತ್ತು ಮಾಹೆ, ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್ ಭಾಗಗಳಲ್ಲಿ ಅಕ್ಟೋಬರ್ 29 ರಿಂದ 30ರವರೆಗೆ ಗುಡುಗು-ಸಿಡಿಲು ಸಹಿತ ವ್ಯಾಪಕ ಮಳೆಯಾಗಲಿದೆ.
ನವೆಂಬರ್ 1ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ
ಇದೇ ಅಕ್ಟೋಬರ್ 29 ಮತ್ತು 30 ರಂದು ಆಂಧ್ರಪ್ರದೇಶದ ಕರಾವಳಿ ಹಾಗೂ ರಾಯಲಸೀಮೆ ಪರಿಸರದಲ್ಲಿ ಮಳೆಯಾಗಲಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಕಡಿಮೆ ಒತ್ತಡದ (ವಾಯುಭಾರ ಕುಸಿತ) ಪ್ರದೇಶ ನಿರ್ಮಾಣಗೊಳ್ಳಲಿದೆ. ತದನಂತರ ಮಳೆರಾಯ ಅಬ್ಬರಿಸಲಿದ್ದಾನೆ. ಕರಾವಳಿ ಭಾಗದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ತಮಿಳುನಾಡಿನ ರಾಮನಾಥಪುರಂ, ವಿರುಧಾನಗರ, ಟುಟಿಕೊರನ್, ವಿಲ್ಲಪುರಂ, ಕೊಯಂಬತ್ತೂರು, ಕನ್ಯಾಕುಮಾರಿ, ಕಾರೈಕಲ್, ಚಂಗಲಪಟ್ಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಕೇರಳದ ಕೆಲವು ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಕೆಲವು ದಿನಗಳ ವಾಯುವ್ಯ, ಮಧ್ಯ ಮತ್ತು ಪಶ್ಚಿಮ ಭಾರತದ ಹೆಚ್ಚಿನ ಭಾಗಗಳು ಮತ್ತು ಪೂರ್ವ ಭಾರತದ ಕೆಲವು ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ರಾಯಲಸೀಮಾ ಮತ್ತು ಆಂಧ್ರ ಪ್ರದೇಶವನ್ನು ಹೊರತುಪಡಿಸಿ ಎಲ್ಲಾ ಪ್ರದೇಶಗಳು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ.
ಅಕ್ಟೋಬರ್ ಅಂತ್ಯದ ವೇಳೆಗೆ ಸುರಿಯುತ್ತಿರುವ ಮಳೆಗೆ ರಾಜ್ಯದ ಬಹುತೇಕ ಡ್ಯಾಂಗಳು ಭರ್ತಿಯಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಯಾವುದೇ ಕ್ಷಣದಲ್ಲಿ ಡ್ಯಾಂ ಗೇಟ್ ತೆರೆಯುವ ಸಾಧ್ಯತೆಗಳಿದ್ದು, ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಮೈಸೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇದ್ದು, ಮಳೆಯ ಸಾಧ್ಯತೆಗಳಿವೆ. ಬಳ್ಳಾರಿಯಲ್ಲಿ ಬೇಸಿಗೆ ವಾತಾವರಣ ಇರಲಿದೆ. ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಕೆಲವು ಕಡೆ ಸಣ್ಣ ಪ್ರಮಾಣದ ಮಳೆಯಾಗಲಿದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ.
ರಾಜ್ಯದ ವಾತಾವರಣ ಹೇಗಿರಲಿದೆ?
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಅತಿ ಹೆಚ್ಚು ಉಷ್ಣಾಂಶ
ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬೀದರ್‌ನಲ್ಲಿ 13.4 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.