ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.23ರಂದು ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 19: ರಾಜ್ಯದ 14 ಜಿಲ್ಲೆಗಳಲ್ಲಿ ಅಕ್ಟೋಬರ್ 23ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇನ್ನುಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಮಂಗಳೂರು ತಾಲೂಕಿನಲ್ಲಿ ಐದು ಮನೆ ಸಂಪೂರ್ಣ ನಾಶವಾಗಿವೆ. ನಾಲ್ಕು ಮನೆ ಭಾಗಶಃ ಹಾನಿಗೀಡಾಗಿದೆ. ಇತರೆ 12 ಕಡೆಗಳಲ್ಲಿ ಆವರಣ ಗೋಡೆ ಕುಸಿದಿದೆ. ಮೂರು ಕಡೆ ಮನೆಗಳ ಗುಡ್ಡ ಕುಸಿದಿದೆ. ಮೂಲ್ಕಿಯಲ್ಲಿ ಭತ್ತದ ಗದ್ದೆಗೆ ನೀರು ನುಗ್ಗಿದೆ. ಗುರುಪುರ, ಕೊಳಂಬೆ, ಅದ್ಯಪಾಡಿಗಳಲ್ಲಿ ಕೃಷಿ ತೋಟಕ್ಕೆ ನೀರು ಪ್ರವೇಶಿಸಿದೆ.

ಇದರಿಂದ ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಸಂಭವಿಸಿದೆ. ಸೋಮವಾರ ಕರಾವಳಿಯ ಕೆಲವು ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆ ಉಡುಪಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಇಂದು ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ತುಮಕೂರು, ಬಾಗಲಕೋಟೆ,ಕೋಲಾರ, ಬೆಳಗಾವಿ, ಗದಗ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸೋಮವಾರ ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು ಇಲ್ಲಿ ಸಹ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಕಳೆದ ಹಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವಾಸ್ತವವಾಗಿ ನಗರದಲ್ಲಿ ಪ್ರತಿದಿನವೂ ಸಾಧಾರಣ ಮಳೆಯಾಗುತ್ತಿದ್ದು, ಎಡಬಿಡದೆ ಸುರಿಯತ್ತಿದ್ದು, ಬೆಂಗಳೂರಿನಲ್ಲಿ ಇಂದಿನಿಂದ ಸಾಧಾರಣ ತೀವ್ರತೆಯ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಕೇರಳ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥವಾಗಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ. ಭೂಕುಸಿತ ಸಂಭವಿಸಿದ್ದು ಈಗಾಗಲೆ ರಕ್ಷಣಾ ಕಾರ್ಯ ಆರಂಭವಾಗಿದೆ. ಪಟ್ಟಣಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ತಿರುವನಂತಪುರಂ, ಕೊಲ್ಲಂ, ಅಲಪ್ಪುರ, ಪಲಕ್ಕಾಡ್, ಕೋಳಿಕ್ಕೋಡ್, ವಯನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 22ರವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಅಕ್ಟೋಬರ್ 22ರವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ

ಕಳೆದ 24 ಗಂಟೆಗಳಲ್ಲಿ, ಕೇರಳ, ಕರಾವಳಿ ಕರ್ನಾಟಕದ ಕೆಲವು ಭಾಗಗಳು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರಾವಳಿ ಆಂಧ್ರಪ್ರದೇಶ, ಕರಾವಳಿ ಒಡಿಶಾ, ವಿದರ್ಭ ಮತ್ತು ಮರಾಠವಾಡದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ತಮಿಳುನಾಡು, ರಾಯಲಸೀಮ, ತೆಲಂಗಾಣ, ಪೂರ್ವ ಉತ್ತರ ಪ್ರದೇಶದ ಕೆಲವು ಭಾಗಗಳು, ಸಿಕ್ಕಿಂ ಮತ್ತು ಅಸ್ಸಾಂನಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

 ರಾಜ್ಯದ ಯಾವ್ಯಾವ ಪ್ರದೇಶಗಳಲ್ಲಿ ಮಳೆಯಾಗಿದೆ?

ರಾಜ್ಯದ ಯಾವ್ಯಾವ ಪ್ರದೇಶಗಳಲ್ಲಿ ಮಳೆಯಾಗಿದೆ?

ವಿರಾಜಪೇಟೆ, ಬೆಳ್ಳೂರು, ಮಂಕಿ, ಸರಗೂರು, ಬರಗೂರು, ಪೊನ್ನಂಪೇಟೆ, ಕೊಟ್ಟಿಗೆಹಾರ, ಬೆಂಗಳೂರು, ಕೋಣನೂರು, ಕಾರ್ಕಳ, ಧರ್ಮಸ್ಥಳ, ಸುಳ್ಯ, ಅಂಕೋಲಾ, ನಾಪೊಕ್ಲು, ಬಂಡೀಪುರ, ಚಿಕ್ಕಮಗಳೂರು, ಕಡೂರು, ಹರಪನಹಳ್ಳಿ, ಜಯಪುರ, ತಿಪಟೂರು, ಕುಣಿಗಲ್, ಆಗುಂಬೆಯಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 24 ಗಂಟೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಇನ್ನುಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
 ಅತಿ ಹೆಚ್ಚು ಗರಿಷ್ಠ ಉಷ್ಣಾಂಶ

ಅತಿ ಹೆಚ್ಚು ಗರಿಷ್ಠ ಉಷ್ಣಾಂಶ

ಕೊಪ್ಪಳದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೀದರ್‌ನಲ್ಲಿ 18.2 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recommended Video

ಶ್ರೇಯಸ್ ಐಯರ್ ನ ಬಿಟ್ಟು ಈತನನ್ನು ನಂಬಿದಕ್ಕೆ ಕೊಹ್ಲಿಗೆ ಮುಖಭಂಗ | Oneindia Kannada

English summary
Meteorological Department Predicted that, Heavy Rainfall Will Occur In 14 Districts Of Karnataka On October 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X