ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ 2 ದಿನ ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 16: ಮುಂದಿನ 2 ದಿನಗಳ ಕಾಲ ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನುಳಿದಂತೆ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯ ಬರುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ.

ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆ ಸುರಿಯುತ್ತಲೇ ಇದ್ದು ಬೆಳೆ ಹಾನಿ, ಕಷ್ಟ ನಷ್ಟಗಳು ಸಂಭವಿಸಿದೆ. ಹಲವು ಜಿಲ್ಲೆಗಳಲ್ಲಿ ಕೆರೆಕಟ್ಟೆಗಳು ತುಂಬಿವೆ. ಅನ್ನದಾತರು ಭಾರಿ ಮಳೆಯಿಂದ ಸಂಕಷ್ಟ ಎದುರಿಸುವಂತಾಗಿದೆ.

ಇನ್ನು ಬೆಂಗಳೂರು ನಗರದಲ್ಲಿ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ರಸ್ತೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ನೀರು ನಿಂತಿದ್ದು ಕೆರೆಯಂತಾಗಿವೆ. ಇದರಿಂದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಗಿದೆ.

ಬೆಂಗಳೂರು ನಗರದಲ್ಲಿ ಶುಕ್ರವಾರ ಸಂಜೆ ಭಾರೀ ಪ್ರಮಾಣದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿದೆ.

ಲಕ್ಷದ್ವೀಪದ ಆಗ್ನೇಯ ಭಾಗದಲ್ಲಿ ಮತ್ತು ಬಂಗಳಾಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 16ರಂದು ಕೇರಳದಲ್ಲಿ ಭಾರೀ ಮಳೆಯಾಗಲಿದೆ, ಅಕ್ಟೋಬರ್ 17ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಾಯುಭಾರ ಕುಸಿತವು ಆಂಧ್ರ ಪ್ರದೇಶದ ಕಡೆ ಸಾಗಲಿದ್ದು, ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಮಂದಿನ 24 ಗಂಟೆಯಲ್ಲಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಕೇರಳದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಭಾರೀ ಮಳೆ ಮುನ್ಸೂಚನೆ ನೀಡಿರುವುದರಿಂದ ಬೆಟ್ಟ ಪ್ರದೇಶದಲ್ಲಿ ರಾತ್ರಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮಳೆಯಿಂದ ಹಾನಿಯಾದರೆ ಕಾರ್ಯಾಚರಣೆಗಾಗಿ 6 ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಸ್ಥಿತಿ ಇನ್ನೂ ಎರಡು ದಿನ ಮುಂದುವರೆಯಲಿದೆ. ಇದರ ಪ್ರಭಾವದಿಂದ ಕೇರಳದಲ್ಲಿ ಮಳೆ ಅಕ್ಟೋಬರ್ 17ರ ತನಕ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕೇರಳ ಸರ್ಕಾರ ಘಟ್ಟ ಪ್ರದೇಶಗಳಲ್ಲಿ ಸಂಜೆ 7 ರಿಂದ ಬೆಳಗ್ಗೆ 7 ಗಂಟೆಯ ತನಕ ಪ್ರಯಾಣ ನಿರ್ಬಂಧಿಸಿದೆ.

ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಚನ್ನಗಿರಿ, ಸಿದ್ದಾಪುರ, ಬೆಂಗಳೂರು ನಗರ, ಎಚ್‌ಎಎಲ್‌, ಮೈಸೂರು, ಶಿರಹಟ್ಟಿ, ಹರಪ್ಪನಹಳ್ಳಿ, ಕುಶಾಲನಗರ, ಭದ್ರಾವತಿ, ಪುತ್ತೂರು, ಲಕ್ಷ್ಮೇಶ್ವರ, ಹಾರಂಗಿ, ಚಿಕ್ಕಮಗಳೂರು, ಮದ್ದೂರು, ಗೋಪಾಲನಗರ, ಹೆಸರಘಟ್ಟ, ಭಾಗಮಂಡಲದಲ್ಲಿ ಮಳೆಯಾಗಿದೆ.

ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಲಿದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಎಚ್‌ಎಎಲ್‌ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 24 ಗಂಟೆ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯ ಬರುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ.

Recommended Video

IPL ಟ್ರೋಫಿ ಗೆಲ್ಲೋದಕ್ಕೆ ಅರ್ಹವಾಗಿರೋರು ನಾವಲ್ಲ ಎಂದ ಧೋನಿ!ಮತ್ಯಾರು? | Oneindia Kannada
ಗರಿಷ್ಠ ಉಷ್ಣಾಂಶ

ಗರಿಷ್ಠ ಉಷ್ಣಾಂಶ

ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೀದರ್‌ನಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

English summary
Meteorological Department Predicted that, Heavy Rainfall Will Occur In 16 Districts Of Karnataka Till October 17.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X