ಅ.24ರವರೆಗೆ ಬೆಂಗಳೂರು ಸೇರಿದಂತೆ ಒಟ್ಟು 16 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು, ಅಕ್ಟೋಬರ್ 20: ಬೆಂಗಳೂರು ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಹವಾಮಾನ ವೈಪರಿತ್ಯದಿಂದ ನಗರದಲ್ಲಿ ಇನ್ನೂ ಎರಡು ದಿನ 48 ಗಂಟೆಗಳ ಕಾಲ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನ ಕೆಲವು ಕಡೆಗಳಲ್ಲಿ ಸೋಮವಾರ ಸಂಜೆ ಸುರಿದ ಜೋರು ಮಳೆಗೆ ಪ್ರತ್ಯೇಕ ಕಡೆಗಳಲ್ಲಿ ಮೂರು ಮರ ಉರುಳಿ ಬಿದ್ದು ಸಂಚಾರಕ್ಕೆ ಅಡಚಣೆಯಾಯಿತು. ಪ್ರಮುಖ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತಿದ್ದರಿಂದ ಜನರು ಪರದಾಡಿದರು. ಮಂಗಳವಾರ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿತ್ತು.

ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇತ್ತಾದರೂ ಮಳೆ ಬಂದಿರಲಿಲ್ಲ. ಸಂಜೆ ಮಹದೇವಪುರ, ಪೂರ್ವ ಮತ್ತು ಯಲಹಂಕ ವಲಯ ವ್ಯಾಪ್ತಿಯಲ್ಲಿ ಗಾಳಿಮತ್ತು ಗುಡುಗು ಸಹಿತ ಸಾಧಾರಣ ಮಳೆ ಸುರಿಯಿತು.

ಇದರಿಂದ ಮಲ್ಲೇಶ್ವರಂನ 12ನೇ ಅಡ್ಡರಸ್ತೆ, ಸಂಜಯನಗರದ ರಾಧಾಕೃಷ್ಣ ವಾರ್ಡ್‌ ರಸ್ತೆ ಹಾಗೂ ತಿಪ್ಪಸಂದ್ರ ಮಾರುಕಟ್ಟೆಪ್ರದೇಶದಲ್ಲಿ ತಲಾ ಒಂದು ಮರ ಉರುಳಿದವು.

ಅರಬ್ಬಿ ಸಮುದ್ರ ಹಾಗೂ ಪಶ್ಚಿಮ ಬಂಗಾಳದಲ್ಲಿ ಉಂಟಾದ ವೈಪರೀತ್ಯದಿಂದಾಗಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಮಳೆ ಅರ್ಭಟ ಹೀಗೆ ಮುಂದುವರಿಯಲಿದೆ.

ಕೆಲವೆಡೆ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆ, ಇನ್ನು ಕೆಲವು ಬಡಾವಣೆಗಳಲ್ಲಿ ಸಾಮಾನ್ಯ ಮಳೆ ಆಗಲಿದೆ. ತಾಪಮಾನ ಗರಿಷ್ಠ 27ರಿಂದ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಹೊಸಕೋಟೆ, ಮದ್ದೂರು, ಸುಬ್ರಹ್ಮಣ್ಯ, ಬೆಂಗಳೂರು ಎಚ್‌ಎಎಲ್‌ ಏರ್‌ಪೋರ್ಟ್, ಜಿಕೆವಿಕೆ, ಮಾಣಿ, ಕದ್ರ, ಬೆಂಗಳೂರು ನಗರ, ಬುಕ್ಕಪಟ್ನ, ಉಚ್ಚಂಗಿದುರ್ಗ, ರಾಮನಗರದಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20. ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

 ಗರಿಷ್ಠ ಉಷ್ಣಾಂಶ ದಾಖಲಾಗಿರುವುದೆಲ್ಲಿ?

ಗರಿಷ್ಠ ಉಷ್ಣಾಂಶ ದಾಖಲಾಗಿರುವುದೆಲ್ಲಿ?

ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೀದರ್‌ನಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+